ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಟುಂಬ ರಾಜಕಾರಣ: ಡಿಎನ್‌ಎ ಟೆಸ್ಟ್ ಮಾಡಿಸೋಣ– ಪ್ರಿಯಾಂಕ್

Published 27 ಮಾರ್ಚ್ 2024, 16:19 IST
Last Updated 27 ಮಾರ್ಚ್ 2024, 16:19 IST
ಅಕ್ಷರ ಗಾತ್ರ

ಡಿಎನ್‌ಎ ಟೆಸ್ಟ್ ಮಾಡಿಸೋಣ. ಯಾರ್‍ಯಾರೆಲ್ಲ ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ ಎಂಬುದನ್ನು ಡಿಎನ್‌ಎ ಕಿಟ್ ಮುಂದೆ ಇಟ್ಟುಕೊಂಡು ಚರ್ಚಿಸೋಣ ಬನ್ನಿ. ಸದಾನಂದ ಗೌಡ, ಕೆ.ಎಸ್‌.ಈಶ್ವರಪ್ಪ ಹಾಗೂ ಅನಂತಕುಮಾರ ಹೆಗಡೆ ಅವರು ‘ಬಿಜೆಪಿ ಒಂದು ಕುಟುಂಬದ ಹಿಡಿತದಲ್ಲಿದೆ. ಪಕ್ಷದ ಶುದ್ಧೀಕರಣಕ್ಕಾಗಿ ಹೊರಬಂದು ಹೋರಾಟ ಮಾಡಬೇಕಿದೆ’ ಎನ್ನುತ್ತಿದ್ದಾರೆ. ಇದ್ಯಾವುದರ ಬಗ್ಗೆ ತಲೆ ಕೆಡಿಸಿಕೊಳ್ಳದ ರಾಜ್ಯ ಬಿಜೆಪಿ ನಾಯಕರು, ಕಾಂಗ್ರೆಸ್ಸಿನ ಆಂತರಿಕ ವಿಷಯಗಳಿಗೆ ತಲೆ ಹಾಕುತ್ತಿದ್ದಾರೆ. ಬಿಜೆಪಿಯವರು ಅಧಿಕಾರಕ್ಕೆ ಬಂದು ಹತ್ತು ವರ್ಷ ಕಳೆದರೂ ದೇವರು ಮತ್ತು ಧರ್ಮದ ಹೆಸರಿನಲ್ಲಿ ಮತಯಾಚಿಸುತ್ತಿದ್ದಾರೆ. ಚುನಾವಣೆಯಲ್ಲಿ ಹೇಳಿಕೊಳ್ಳುವಂತಹ ಸ್ವಂತ ಸಾಧನೆ ಬಿಜೆಪಿಯವರ ಬಳಿ ಇಲ್ಲ.

– ಪ್ರಿಯಾಂಕ್ ಖರ್ಗೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT