ಶನಿವಾರ, 7 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಐಜಿಪಿ ಪರವಾಗಿ ಕ್ಷಮೆಯಾಚಿಸುವೆ: ಪ್ರಿಯಾಂಕ್

Published 13 ಆಗಸ್ಟ್ 2024, 16:03 IST
Last Updated 13 ಆಗಸ್ಟ್ 2024, 16:03 IST
ಅಕ್ಷರ ಗಾತ್ರ

ಕಲಬುರಗಿ: ‘ಗುಲಬರ್ಗಾ ವಿಶ್ವವಿದ್ಯಾಲಯದ ಘಟಿಕೋತ್ಸವದ ಸಭಾಂಗಣಕ್ಕೆ ಪ್ರವೇಶ ನೀಡುವ ವೇಳೆ ಐಜಿಪಿ ಹಾಗೂ ಪ್ರಭಾರ ಪೊಲೀಸ್ ಕಮಿಷನರ್ ಅಜಯ್ ಹಿಲೋರಿ ಅವರು ಪತ್ರಕರ್ತರನ್ನು ತಳ್ಳಿ ಅನುಚಿತವಾಗಿ ವರ್ತಿಸಿದ ಬಗ್ಗೆ ನಾನು ಕ್ಷಮೆಯಾಚಿಸುತ್ತೇನೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದರು.

ಘಟಿಕೋತ್ಸವ ಸಮಾರಂಭದ ವೇಳೆ ಪತ್ರಕರ್ತರ ಜತೆಗೆ ಅಜಯ್ ಹಿಲೋರಿ ಹಾಗೂ ಇತರ ಪೊಲೀಸ್ ಅಧಿಕಾರಿಗಳು ಪತ್ರಕರ್ತರೊಂದಿಗೆ ಅಮಾನವೀಯವಾಗಿ ವರ್ತಿಸಿದ ಬಗ್ಗೆ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ಬಾಬುರಾವ ಯಡ್ರಾಮಿ ಸೇರಿದಂತೆ ಹಿರಿಯ ಪತ್ರಕರ್ತರು ಮಂಗಳವಾರ ಸಚಿವರ ಗಮನಕ್ಕೆ ತಂದು, ಪೊಲೀಸ್ ಇಲಾಖೆಯ ವರ್ತನೆ ಕುರಿತು ಪ್ರಶ್ನಿಸಿದರು.

‘ಸಂಬಂಧಪಟ್ಟ ಅಧಿಕಾರಿಯ ಜತೆಗೆ ಮಾತನಾಡುತ್ತೇನೆ. ಅವರ ಪರವಾಗಿ ನಾನು ಕ್ಷಮೆ ಕೇಳುತ್ತೇನೆ’ ಎಂದರು. ‘ನೀವು ಕ್ಷಮೆ ಕೇಳುವುದು ಬೇಡ. ಪತ್ರಕರ್ತರಿಗೆ ವಿನಾಕಾರಣ ತೊಂದರೆ ಕೊಡದಂತೆ ಪೊಲೀಸರಿಗೆ ಸೂಚನೆ ನೀಡಿರಿ’ ಎಂದು ಪತ್ರಕರ್ತರು ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT