ಶುಕ್ರವಾರ, ಆಗಸ್ಟ್ 12, 2022
23 °C
ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭದಲ್ಲಿ ಶಾಸಕ ಪ್ರಿಯಾಂಕ್‌ ಖರ್ಗೆ

ಚಿತ್ತಾಪುರ: ಓದುವ ಮನಸ್ಸು, ಓದಿಸುವ ಇಚ್ಛೆ ಇರಬೇಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ತಾಪುರ: ‘ಶಾಲಾ–ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಸರಿಯಾಗಿ ಓದುವ ಮನಸ್ಸಿರಬೇಕು. ಅದೇ ರೀತಿ ತಮ್ಮ ಮಕ್ಕಳು ಚೆನ್ನಾಗಿ ಓದಲಿ ಎನ್ನುವ ಇಚ್ಛೆ ಪಾಲಕರಿಗೂ ಇರಬೇಕು’ ಎಂದು ಶಾಸಕ ಪ್ರಿಯಾಂಕ್ ಎಂ. ಖರ್ಗೆ ಹೇಳಿದರು.

ಪಟ್ಟಣದ ನಾಗಾವಿ ಶಿಕ್ಷಣ ಹಬ್‌ನಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಯಲ್ಲಿ ಚಿತ್ತಾಪುರ ಬ್ಯಾಡ್ಮಿಂಟನ್ ಅಸೋಶಿಯೇಷನ್ ಸಹಭಾಗಿತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ 2021-22ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ 85 ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರ ವಿತರಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಕುತೂಹಲ ಇರಬೇಕು. ಕಲಿಕೆಯ ಆಸಕ್ತಿ ಹಾಗೂ ಪ್ರಶ್ನೆ ಕೇಳುವ ಧೈರ್ಯ ರೂಢಿಸಿಕೊಳ್ಳಬೇಕು. ವೈಫಲ್ಯದ ಕುರಿತು ಹೆಚ್ಚಾಗಿ ಮತ್ತು ನಕರಾತ್ಮಕವಾಗಿ ಯೋಚಿಸಬಾರದು. ತಪ್ಪುಗಳನ್ನು ತಿದ್ದಿಕೊಂಡು ಮುಂದೆ ಹೋಗಬೇಕು ಎನ್ನುವುದನ್ನು ‌ಗಮನದಲ್ಲಿಡಬೇಕು ಎಂದು ಕಿವಿಮಾತು ಹೇಳಿದರು.

ನಿವೃತ್ತ ಉಪನ್ಯಾಸಕ ಡಾ.ವೆಂಕಟರೆಡ್ಡಿ ವಿಶೇಷ ಉಪನ್ಯಾಸ ನೀಡಿದರು. ಬಾಬು ಕಾಶಿ ಪ್ರಾಸ್ತಾವಿಕ ಮಾತನಾಡಿದರು. ಕಾಂಗ್ರೆಸ್ ಮುಖಂಡ ಸುಭಾಷ್ ರಾಠೋಡ್, ಶಿಕ್ಷಣಾಧಿಕಾರಿ ಸಿದ್ದವೀರಯ್ಯ ರುದ್ನೂರ ಮಾತನಾಡಿದರು. ನಾಗರೆಡ್ಡಿ ಪಾಟೀಲ್ ಕರದಾಳ, ಭೀಮಣ್ಣ ಸಾಲಿ, ಮಹೆಮೂದ್ ಸಾಹೇಬ್, ಪುರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಕಾಳಗಿ, ಉಪಾಧ್ಯಕ್ಷೆ ಶೃತಿ ಪೂಜಾರಿ, ತಹಶೀಲ್ದಾರ್ ಉಮಾಕಾಂತ ಹಳ್ಳೆ, ತಾಲ್ಲೂಕು ಪಂಚಾಯಿತಿ ಅಧಿಕಾರಿ ನೀಲಗಂಗಾ ಬಬಲಾದ, ಡಾ.ಕಿರಣ ದೇಶಮುಖ, ವೀರಣ್ಣಗೌಡ ಪರಸರೆಡ್ಡಿ, ರಮೇಶ ಮರಗೋಳ, ಶಿವಾನಂದ ಪಾಟೀಲ್, ಶಿವರುದ್ರ ಭೀಣಿ, ಜಗಣ್ಣಗೌಡ ರಾಮತೀರ್ಥ, ಶ್ರೀನಿವಾಸ ಸಗರ, ರಾಜಶೇಖರ ತಿಮ್ಮನಾಯಕ, ಮುಕ್ತಾರ್ ಪಟೇಲ್, ಸಿದ್ದುಗೌಡ ಅಫಜಲಪುರಕರ್, ಅಜೀಜ್ ಸೇಠ ರಾವೂರ, ಶಿವಾನಂದ ಹೊನಗುಂಟಿ, ಸಾಬಣ್ಣ ಕಾಶಿ ಇದ್ದರು. ಸಂತೋಷಕುಮಾರ ಶಿರನಾಳ, ಮಲ್ಲಿಕಾರ್ಜುನ ಸೇಡಂ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.