ಕಲಬುರಗಿ: ‘ರಾಜ್ಯಪಾಲರ ಕಚೇರಿಗಳಾದ ಲೋಕಭವನಗಳು ಬಿಜೆಪಿ, ಆರ್ಎಸ್ಎಸ್ ಕಚೇರಿಗಳಾಗಿವೆ. ಬಿಜೆಪಿಯೇತರ ಪಕ್ಷಗಳು ಸರ್ಕಾರ ರಚಿಸದಂತೆ ಕೇಂದ್ರ ಸರ್ಕಾರ ರಾಜ್ಯಪಾಲರನ್ನು ಬಳಸಿಕೊಂಡು ಶತಾಯಗತಾಯ ಪ್ರಯತ್ನ ನಡೆಸುತ್ತಿದೆ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಹಾಗೂ ಐಟಿ, ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

‘ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದ ಪಕ್ಷವನ್ನು ಸರ್ಕಾರ ರಚನೆಗೆ ಆಹ್ವಾನಿಸುವುದು ರಾಜ್ಯಪಾಲರ ಕರ್ತವ್ಯ. ಆದರೆ, ಉದ್ದೇಶಪೂರ್ವಕವಾಗಿ ತಮಿಳುನಾಡಿನಲ್ಲಿ ಟಿವಿಕೆ ಪಕ್ಷದ ಅಧ್ಯಕ್ಷ ಸಿ. ವಿಜಯ್ ಜೋಸೆಫ್ ಅವರನ್ನು ಬಹುಮತ ಸಾಬೀತು ಮಾಡುವಂತೆ ತಿಳಿಸಿ ವಾಪಸ್ ಕಳುಹಿಸಿದ್ದಾರೆ. ಬಹುಮತ ಸಾಬೀತುಪಡಿಸಬೇಕಿರುವುದು ವಿಧಾನಸಭೆಯಲ್ಲಿಯೇ ಹೊರತು ರಾಜ್ಯಪಾಲರ ಮನೆಯಲ್ಲಿ ಅಲ್ಲ. ಇಷ್ಟೊಂದು ಸರಳ ಸತ್ಯ ರಾಜ್ಯಪಾಲರಿಗೆ ಗೊತ್ತಿಲ್ಲವೇ’ ಎಂದು ಪ್ರಶ್ನಿಸಿದರು.

‘ಬಹುಮತ ಇಲ್ಲದಿದ್ದರೂ ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ, ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡಣವೀಸ್ ಅವರಿಗೆ ಅವಕಾಶ ಕೊಟ್ಟಿದ್ದು ಏಕೆ? ಅವರಿಗೊಂದು ನ್ಯಾಯ, ಬೇರೆ ಪಕ್ಷದವರೊಂದಿಗೆ ನ್ಯಾಯವೇ’ ಎಂದರು.

ನಿಷ್ಪಕ್ಷಪಾತ ಚುನಾವಣೆ ನಡೆದರೆ ಬಿಜೆಪಿ ಗೆಲ್ಲಲ್ಲ: ಆರ್ಎಸ್ಎಸ್ ಬೆಂಬಲವಿಲ್ಲದೇ, ಐಟಿ, ಇಡಿ, ಸಿಬಿಐಗಳನ್ನು ವಿರೋಧ ಪಕ್ಷದಗಳ ಮೇಲೆ ಛೂಬಿಡದೇ, ರಾಜ್ಯಪಾಲರ ಹಸ್ತಕ್ಷೇಪವಿಲ್ಲದೇ ಬಿಜೆಪಿ ಯಾವುದೇ ರಾಜ್ಯದಲ್ಲಿ ಚುನಾವಣೆ ಎದುರಿಸಿದರೂ ಹೀನಾಯವಾಗಿ ಸೋಲು ಕಾಣಲಿದೆ ಎಂದು ಪ್ರಿಯಾಂಕ್ ಖರ್ಗೆ ಭವಿಷ್ಯ ನುಡಿದರು.

ತಮಿಳುನಾಡಿನಲ್ಲಿ ಸಂವಿಧಾನ ಉಳಿಸುವ, ಜಾತ್ಯತೀತ ಪರಂಪರೆಯನ್ನು ಮುಂದಕ್ಕೆ ಒಯ್ಯುವ ಉದ್ದೇಶದಿಂದ ಕಾಂಗ್ರೆಸ್ ಡಿಎಂಕೆ ಮಿತ್ರಪಕ್ಷವಾಗಿದ್ದರೂ ಟಿವಿಕೆಗೆ ಬೆಂಬಲ ವ್ಯಕ್ತಪಡಿಸಿದೆ. ಈ ನಿರ್ಧಾರವನ್ನು ಪಕ್ಷದ ಸ್ಥಳೀಯ ನಾಯಕರೊಂದಿಗೆ ಚರ್ಚೆ ಮಾಡಿದ ಬಳಿಕವೇ ಕೈಗೊಳ್ಳಲಾಗಿದೆ ಎಂದರು.

ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ ನಡೆದಿರುವ ಬಗ್ಗೆ ರಾಜ್ಯ ಸರ್ಕಾರದ ಗಮನಕ್ಕೆ ಬಂದಿದ್ದು, ವಿ.ವಿ.ಯ ಕಾರ್ಯಕಾರಿ ಮಂಡಳಿ ಸದಸ್ಯರಾಗಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರು ಈಚೆಗೆ ನಡೆದ ನೇಮಕಾತಿಗಳ ಬಗ್ಗೆ ವರದಿ ತರಿಸಿಕೊಂಡಿದ್ದಾರೆ. ಸಿಯುಕೆಯು ಆರ್ಎಸ್ಎಸ್ ಕೇಂದ್ರವಾಗಿದೆ. ಅಲ್ಲಿ ಬೀದರ್ ಸಂಸದರು, ಕಲಬುರಗಿ ಸಂಸದರಿಗೂ ಒಳಗೆ ಪ್ರವೇಶ ನೀಡಲು ನಿರಾಕರಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಕಾರ್ಯಕ್ರಮ ನಡೆಸಲು ಅನುಮತಿ ಕೇಳಿದರೂ ಇಷ್ಟುದ್ದ ವಿವರಣೆ ನೀಡಿ ಅವಕಾಶ ನಿರಾಕರಿಸಿದರು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಈ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸಿಗಬೇಕು ಎಂಬ ಉದ್ದೇಶದಿಂದ ತಾವು ಕೇಂದ್ರ ಸಚಿವರಾಗಿದ್ದಾಗ ವಿ.ವಿ. ಮಂಜೂರು ಮಾಡಿಸಿದ್ದರು. ಈಗ ಅದು ಆರ್ಎಸ್ಎಸ್ ಶಾಖೆಯಾಗಿ ಬದಲಾಗಿದೆ ಎಂದು ಟೀಕಿಸಿದರು.

ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಗುತ್ತಿಗೆ ಸಿಬ್ಬಂದಿಯನ್ನು ಸೇವೆಯಿಂದ ಕೈಬಿಟ್ಟಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವುದು ನನ್ನ ಗಮನಕ್ಕಿದೆ. ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರೊಂದಿಗೆ ಮಾತನಾಡಿದ್ದೇನೆ. ಯಾರಿಗೂ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.