ಕಲಬುರ್ಗಿ: ನವೀಕರಿಸಬಹುದಾದ ಇಂಧನ ಅಭಿವೃದ್ದಿ ಪ್ರಾದೇಶಿಕ ಕಚೇರಿಯನ್ನು ಕಲಬುರ್ಗಿಯಲ್ಲೇ ಉಳಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿ ಅವರಿಗೆ ಕೆಪಿಸಿಸಿ ವಕ್ತಾರ, ಶಾಸಕ ಪ್ರಿಯಾಂಕ್ ಖರ್ಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಕಲ್ಯಾಣ ಕರ್ನಾಟಕದ ಪ್ರಮಖ ಕೇಂದ್ರವಾದ ಕಲಬುರ್ಗಿಯಲ್ಲಿ ನವೀಕರಿಸಬಹುದಾದ ಇಂಧನ ಅಭಿವೃದ್ದಿ ಪ್ರಾದೇಶಿಕ ಕಚೇರಿ ಮಂಜೂರಾಗಿ ಉದ್ಘಾಟನೆಗೊಂಡಿತ್ತು. ಆದರೆ, ಸಧ್ಯದ ಮಾಹಿತಿ ಹಾಗೂ ಪತ್ರಿಕಾ ವರದಿ ಪ್ರಕಾರ ಪ್ರಾದೇಶಿಕ ಕಚೇರಿಯನ್ನು ಕಲಬುರ್ಗಿಯಿಂದ ಬೇರೆಡೆ ಸ್ಥಳಾಂತರಿಸುವ ಮಾಹಿತಿ ಇದೆ. ಹಾಗಾಗಿ, ಈ ಕೂಡಲೇ ಸಿಎಂ ಯಡಿಯೂರಪ್ಪನ ಕಚೇರಿಯನ್ನು ಉಳಿಸಬೇಕು ಎಂದು ಆಗ್ರಹಿಸಿದ್ದಾರೆ.

ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಕಚೇರಿಯಿಂದಾಗಿ ಹಿಂದುಳಿದ ಕಲ್ಯಾಣ ಕರ್ನಾಟಕದಲ್ಲಿ ಆಗಬಹುದಾಗದ ಪ್ರಮುಖ ಅನುಕೂಲಗಳನ್ನು ಹೆಸರಿಸಿದುವ ಶಾಸಕರು, ಈ ಭಾಗದ ರೈತರಿಗೆ ಹಾಗೂ ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಸೋಲಾರ್ ಪೆನಲ್ ದೊರಕಿಸಿಕೊಡಬಹುದು. ಜೊತೆಗೆ ಸೋಲಾರ್ ಪಾರ್ಕ್ ನಿರ್ಮಾಣ ಮತ್ತು ವಿಂಡ್ ಮಿಲ್ ಸ್ಥಾಪನೆ ಮಾಡಬಹುದು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ನೀರಾವರಿ ಕೊರತೆ ಬಹಳಷ್ಟಿದ್ದು, ನೀರಿನ ಸಮಸ್ಯೆ ನೀಗಿಸಲು ನೀರಿನ ಕಾಲುವೆಯುದ್ದಕ್ಕೂ ಅಥವಾ ನದಿಗಳಿಗೆ ಸೋಲಾರ್ ಪೆನಲ್ ಅಳವಡಿಸಿ ಜಮೀನುಗಳಿಗೆ ನೀರು ಹರಿಸಬಹುದಾಗಿದೆ. ಇದರಿಂದ ರೈತರ ನೀರಿನ ಸಮಸ್ಯೆ ಬಗೆಹರಿಯುತ್ತದೆ. ಇದರ ಜೊತೆಗೆ ಇನ್ನಿತರ ಪ್ರಮಖ ಕಾರ್ಯಕ್ರಮಗಳನ್ನು ರೂಪಿಸುವುದರ ಮೂಲಕ ಈ ಭಾಗದ ಸಮಗ್ರ ಅಭಿವೃದ್ದಿಗೆ ನಿಗಮದ ಪ್ರಾದೇಶಿಕ ಕಚೇರಿ ಪ್ರಮಖ ಪಾತ್ರ ವಹಿಸಲಿದೆ ಎಂದು ಒತ್ತಿ ಹೇಳಿದ್ದಾರೆ.

ಪ್ರಸ್ತುತ ಸರ್ಕಾರ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ನಿರಾಸಕ್ತಿ ತೋರಿಸುತ್ತಿದ್ದು, ಈ ಕಚೇರಿಯನ್ನು ಬೇರೆಡೆಗೆ ಸ್ಥಳಾಂತರ ಮಾಡುವ ಮೂಲಕ ಮತ್ತೊಮ್ಮೆ ಈ ಭಾಗಕ್ಕೆ ಅನ್ಯಾಯ ಮಾಡಿದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.