ಮಂಗಳವಾರ, ನವೆಂಬರ್ 19, 2019
26 °C

ಬಿತ್ತನೆ ಬೀಜ ವಿತರಿಸದ ಸರ್ಕಾರ: ಪ್ರಿಯಾಂಕ್‌ ಆಕ್ರೋಶ

Published:
Updated:

ಕಲಬುರ್ಗಿ: ‘ಜಿಲ್ಲೆಯಲ್ಲಿ ರೈತರಿಗೆ ಬಿತ್ತನೆಬೀಜಗಳ ಕೊರತೆಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ನಾನು ಪತ್ರ ಬರೆದರೂ ರಾಜ್ಯ ಸರ್ಕಾರ ಸ್ಪಂದಿಸಿಲ್ಲ’ ಎಂದು ಶಾಸಕ ಪ್ರಿಯಾಂಕ್‌ ಖರ್ಗೆ ಕಿಡಿ ಕಾರಿದ್ದಾರೆ.

‘ರೈತರ ಸಂಪರ್ಕ ಕೇಂದ್ರಗಳ ಮುಂದೆ ರೈತರು ದಿನವಿಡೀ ಸಾಲುಗಟ್ಟಿ ನಿಲ್ಲುವ ಸ್ಥಿತಿ ಇದೆ. ತಕ್ಷಣ ಬೀಜ ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಉಪಮುಖ್ಯಮಂತ್ರಿಗಳೂ ಆದ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರಿಗೆ ಪತ್ರ ಬರೆದಿದ್ದೇನೆ. ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಸರ್ಕಾರ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ’ ಎಂದು ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಪ್ರತಿಕ್ರಿಯಿಸಿ (+)