ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್ಥಿಕ ಸಮಾನತೆಗೆ ಶ್ರಮಿಸುತ್ತಿದ್ದೇವೆ: ಪ್ರಿಯಾಂಕ್ ಖರ್ಗೆ

Published 1 ಏಪ್ರಿಲ್ 2024, 6:05 IST
Last Updated 1 ಏಪ್ರಿಲ್ 2024, 6:05 IST
ಅಕ್ಷರ ಗಾತ್ರ

ಅಫಜಲಪುರ: ‘ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಒಂದು ತಿಂಗಳು ಶ್ರಮವಹಿಸಿ ಕೆಲಸ ಮಾಡಿದರೆ ಐದು ವರ್ಷ ನೆಮ್ಮದಿಯ ಬದುಕು ಸಾಗಿಸಲು ಸಾಧ್ಯವಾಗುತ್ತದೆ. ನಾವು ಬಿಜೆಪಿ ಪಕ್ಷದವರ ಹಾಗೆ ಭಾವನಾತ್ಮಕವಾಗಿ ಮತ ಕೇಳುತ್ತಿಲ್ಲ, ಬದಲಾಗಿ ಅಭಿವೃದ್ಧಿ ಮುಂದಿಟ್ಟು ಮತ ಕೇಳುತ್ತಿದ್ದೇವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಪಟ್ಟಣದ ನ್ಯಾಷನಲ್ ಫಂಕ್ಷನ್ ಹಾಲ್‌ನಲ್ಲಿ ಕಲಬುರಗಿ ಲೋಕಸಭಾ ಚುನಾವಣೆ ನಿಮಿತ್ತ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು. ತಾಲ್ಲೂಕಿನ ಭೀಮಾ ನದಿಗೆ ನೀರು ಹರಿಸಲು ಶಾಸಕರ ಜೊತೆಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ಶಾಸಕರು ಇಂತಹ ಇಳಿ ವಯಸ್ಸಿನಲ್ಲೂ ಕಲಬುರಗಿಯಿಂದ ಬೆಂಗಳೂರಿಗೆ ಓಡಾಡಿದ್ದಾರೆ. ಎಂಪಿಯವರು ಸತ್ಯಾಗ್ರಹಕ್ಕೆ ಬಂದು ನೀರು ಬಿಡಿಸುವ ಕೆಲಸ ಮಾಡುವುದನ್ನು ಬಿಟ್ಟು ಬಿಪಿ ಚೆಕ್‌ ಮಾಡಿದರು’ ಎಂದು ವ್ಯಂಗ್ಯವಾಡಿದರು.

ಸಚಿವ ಡಾ.ಶರಣಪ್ರಕಾಶ ಪಾಟೀಲ್ ಮಾತನಾಡಿ, ಜಾತಿ ನೋಡಿ ಮತ ಚಲಾಯಿಸಬೇಡಿ, ಅಭಿವೃದ್ಧಿ ನೋಡಿ ಮತ ನೀಡಿ’ ಎಂದರು.

ಶಾಸಕ ಎಂ.ವೈ.ಪಾಟೀಲ್ ಮಾತನಾಡಿ, ‘ನಮ್ಮ ಸರ್ಕಾರ ವಿಧಾನಸಭೆ ಚುನಾವಣೆಯಲ್ಲಿ ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸಿದೆ. ಲೋಕಸಭಾ ಚುನಾವಣೆಯಲ್ಲಿ ನಮ್ಮ ಭಾಗದ ಸಮಗ್ರ ಅಭಿವೃದ್ಧಿಗೆ ರಾಧಾಕೃಷ್ಣ ದೊಡ್ಡಮನಿ ಅವರಿಗೆ ಮತ ನೀಡಿ ಎಂದು ಮನವಿ ಮಾಡಿದರು. ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಮಾತನಾಡಿದರು.

ಶಾಸಕ ಅಲ್ಲಮಪ್ರಭು ಪಾಟೀಲ, ಚಂದ್ರಶೇಖರ ಪಾಟೀಲ, ತಿಪ್ಪಣ್ಣಪ್ಪ ಕಮಕನೂರ, ರೇವುನಾಯಕ ಬೆಳಮಗಿ, ಬಾಬುರಾವ ಚಿಂಚನಸೂರ, ಶರಣಪ್ಪ ಮಟ್ಟೂರ, ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಕೆಪಿಸಿಸಿ ಸದಸ್ಯ ಅರುಣಕುಮಾರ ಪಾಟೀಲ್, ರಮೇಶ ಪೂಜಾರಿ, ಶರಣು ಕುಂಬಾರ ಸೇರಿದಂತೆ ಹಲವರು ಹಾಜರಿದ್ದರು. 

ಕಾಂಗ್ರೆಸ್ ಪಕ್ಷದ ಚುನಾವಣೆಯ ಪ್ರಚಾರ ಸಭೆಯಲ್ಲಿ ಕಾರ್ಯಕರ್ತರು ಮಜ್ಜಿಗೆ ಪಾಕೆಟ್ ಗಳಿಗಾಗಿ ಪರದಾಡಿದರು
ಕಾಂಗ್ರೆಸ್ ಪಕ್ಷದ ಚುನಾವಣೆಯ ಪ್ರಚಾರ ಸಭೆಯಲ್ಲಿ ಕಾರ್ಯಕರ್ತರು ಮಜ್ಜಿಗೆ ಪಾಕೆಟ್ ಗಳಿಗಾಗಿ ಪರದಾಡಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT