ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ: ಬೇಡಿಕೆಯಷ್ಟು ರಸಗೊಬ್ಬರ ಪೂರೈಕೆಗೆ ಪ್ರಿಯಾಂಕ್ ಆಗ್ರಹ

Last Updated 9 ಜೂನ್ 2022, 16:11 IST
ಅಕ್ಷರ ಗಾತ್ರ

ಕಲಬುರಗಿ: ಮುಂಗಾರು ಹಂಗಾಮಿಗೆ ಬೇಕಾದ ಅಗತ್ಯ ರಸಗೊಬ್ಬರ ಪೂರೈಕೆ ಮಾಡಬೇಕು ಎಂದು ಆಗ್ರಹಿಸಿ ಶಾಸಕ ಪ್ರಿಯಾಂಕ್ ಖರ್ಗೆ ಕೃಷಿ ಸಚಿವ ಬಿ.ಸಿ. ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಅವರಿಗೆ ಪತ್ರ ಬರೆದಿದ್ದಾರೆ.

‘ಮುಂಗಾರು ಹಂಗಾಮಿನಲ್ಲಿ ಚಿತ್ತಾಪುರ ತಾಲ್ಲೂಕಿನಲ್ಲಿ 1.20 ಲಕ್ಷ ಹೆಕ್ಟೇರ್ ಬಿತ್ತನೆಯಾಗುತ್ತಿದ್ದು, ಇದರಲ್ಲಿ 89 ಸಾವಿರ ಹೆಕ್ಟೇರ್ ತೊಗರಿ, ಏಳು ಸಾವಿರ ಹೆಕ್ಟೇರ್ ಉದ್ದು ಹಾಗೂ 13 ಸಾವಿರ ಹೆಕ್ಟೇರ್ ಹೆಸರು ಬಿತ್ತನೆಯಾಗುತ್ತದೆ. ಇಡೀ‌ ಕಲಬುರಗಿ ಜಿಲ್ಲೆಯಲ್ಲಿ 7.84 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗುತ್ತದೆ. ಇದರಲ್ಲಿ 5.81 ಲಕ್ಷ ಹೆಕ್ಟೇರ್ ತೊಗರಿ, 27 ಸಾವಿರ ಹೆಕ್ಟೇರ್ ಉದ್ದು ಹಾಗೂ 85 ಸಾವಿರ ಹೆಕ್ಟೇರ್ ಹೆಸರು ಬಿತ್ತನೆಯಾಗುತ್ತದೆ’ಎಂದುಅವರುತಿಳಿಸಿದ್ದಾರೆ.‌

‘ಜಿಲ್ಲೆಯಾದ್ಯಂತ ಸುಮಾರು 65 ಸಾವಿರ ಮೆಟ್ರಿಕ್ ಟನ್‌ಗಳಷ್ಟು ಡಿಎಪಿ ರಸಗೊಬ್ಬರದ ಅವಶ್ಯಕತೆ ಇದೆ. ಆದರೆ, ಸದ್ಯ ಜಿಲ್ಲೆಯಲ್ಲಿ ಸಮರ್ಪಕವಾಗಿ ರಸಗೊಬ್ಬರ ಪೂರೈಕೆ ಆಗದಿರುವ ಕಾರಣ ರೈತರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ’ ಎಂದು ತಿಳಿಸಿದ್ದಾರೆ.

‘ಚಿತ್ತಾಪುರ ತಾಲ್ಲೂಕಿನಲ್ಲಿ ರಸಗೊಬ್ಬರ ಸಿಗದ ಕಾರಣ ರೈತರು ಹೊರಗಿನ ಜಿಲ್ಲೆಗಳಿಗೆ ತೆರಳಿ ಅಧಿಕ ಹಣ ತೆತ್ತು ರಸಗೊಬ್ಬರ ಖರೀದಿಸುತ್ತಿದ್ದಾರೆ. ಚಿತ್ತಾಪುರ ತಾಲ್ಲೂಕಿಗೆ ಮತ್ತು ಇಡೀ ಕಲಬುರಗಿ ಜಿಲ್ಲೆಯ ರೈತರಿಗೆ ಸಮರ್ಪಕವಾಗಿ ಡಿಎಪಿ ರಸಗೊಬ್ಬರ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಅವರು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT