ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ | ಪಾಕ್‌ ಪರ ಘೋಷಣೆ ಕೂಗಿದವರಿಗೆ ಕಠಿಣ ಶಿಕ್ಷೆ ವಿಧಿಸಿ: ಬಿ.ಆರ್‌. ಪಾಟೀಲ

Published 6 ಮಾರ್ಚ್ 2024, 15:12 IST
Last Updated 6 ಮಾರ್ಚ್ 2024, 15:12 IST
ಅಕ್ಷರ ಗಾತ್ರ

ಕಲಬುರಗಿ: ವಿಧಾನಸೌಧದ ಆವರಣದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿರುವುದು ಗಂಭೀರ ವಿಷಯವಾಗಿದ್ದು, ಸರ್ಕಾರ ವಿಶೇಷ ತಂಡವನ್ನು ರಚಿಸಿ ತನಿಖೆ ನಡೆಸಬೇಕು. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಮುಖ್ಯಮಂತ್ರಿ ರಾಜಕೀಯ ಸಲಹೆಗಾರ ಬಿ.ಆರ್‌. ಪಾಟೀಲ ಒತ್ತಾಯಿಸಿದ್ದಾರೆ.

‘ಘೋಷಣೆ ಕೂಗಿದ್ದು ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ಮೇಲ್ನೋಟಕ್ಕೆ ಸಾಬೀತು ಆಗಿದೆ. ದೇಶದ ಎಲ್ಲಾ ನಿವಾಸಿಗಳು ಪಕ್ಷಾತೀತವಾಗಿ ದೇಶ ದ್ರೋಹಿಗಳ ಕೃತ್ಯವನ್ನು ಖಂಡಿಸಬೇಕು. ಇದರಲ್ಲಿ ತುಷ್ಟೀಕರಣ ಮಾಡುವ ಪ್ರಶ್ನೆಯೇ ಇಲ್ಲ. ದೇಶ ದ್ರೋಹಿಗಳ ಮೇಲೆ ಖಡಕ್ಕಾದ ಕಾನೂನು ಚಲಾವಣೆ ಮಾಡಿ, ತನಿಖೆಗೆ ಒಳಪಡಿಸಬೇಕು’ ಎಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT