ಮಂಗಳವಾರ, ಮಾರ್ಚ್ 28, 2023
31 °C
ಗುಲಬರ್ಗಾ ವಿಶ್ವವಿದ್ಯಾಲಯದ ಸಹೊದ್ಯೋಗಿ ಮೇಲೆ ಹಲ್ಲೆ

ಪ್ರಾಧ್ಯಾಪಕ ವಿದ್ಯಾಸಾಗರ ಅವರ ಮೇಲೆ ಹಲ್ಲೆ ಪ್ರೊ.ಮೇಲಕೇರಿ ಅಮಾನತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಇಲ್ಲಿಯ ಗುಲಬರ್ಗಾ ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ.ಜಿ.ಎಂ.ವಿದ್ಯಾಸಾಗರ ಅವರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಹಂಗಾಮಿ ಕುಲಪತಿ, ಮನೋವಿಜ್ಞಾನ ವಿಭಾಗದ ಪ್ರಾಧ್ಯಾಪಕ ಪ್ರೊ.ಎಸ್‌.‍ಪಿ.ಮೇಲಕೇರಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಆಗಸ್ಟ್ 28ರಂದು ನಡೆದ ಸಿಂಡಿಕೇಟ್‌ ಸಭೆಯಲ್ಲಿ ಅಮಾನತುಗೊಳಿಸುವ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಹಂಗಾಮಿ ಕುಲಪತಿ ಪ್ರೊ.ಚಂದ್ರಕಾಂತ ಯಾತನೂರ ಅವರು 29ರಂದು ಸಿಂಡಿಕೇಟ್‌ ನಿರ್ಣಯಕ್ಕೆ ಅನುಮೋದನೆ ನೀಡಿದ್ದರು. ಕುಲಸಚಿವರು ಸೆಪ್ಟೆಂಬರ್ 1ಕ್ಕೆ ಅಮಾನತು ಆದೇಶವನ್ನು ಹೊರಡಿಸಿದ್ದಾರೆ.

‘ಮೇಲಕೇರಿ ಅವರ ಸಂಬಂಧಿಯೊಬ್ಬರು ಸಸ್ಯಶಾಸ್ತ್ರ ವಿಭಾಗದಲ್ಲಿ ಎಂ.ಫಿಲ್ ಅಧ್ಯಯನ ಮಾಡುತ್ತಿದ್ದು, ಅವರು ನಿಯಮಾನುಸಾರ ಪೂರ್ಣಾವಧಿಯಾಗಿ ಸಂಶೋಧನೆ ಮಾಡದೇ ಕಾಲೇಜೊಂದರಲ್ಲಿ ಕೆಲಸ ಮಾಡುತ್ತಾ, ಎಂ.ಫಿಲ್ ಮಾಡುತ್ತಿದ್ದುದರಿಂದ ವಿಭಾಗದ ಮುಖ್ಯಸ್ಥ ಪ್ರೊ.ಜಿ.ಎಂ.ವಿದ್ಯಾಸಾಗರ ಅವರು ಮೇಲಕೇರಿ ಅವರ ಸಂಬಂಧಿ ವಿದ್ಯಾರ್ಥಿಗೆ ಶಿಷ್ಯವೇತನ ಮಂಜೂರು ಮಾಡಲು ಒಪ್ಪಿರಲಿಲ್ಲ. ಇದು ಮೇಲಕೇರಿ ಅವರ ಅಸಮಾಧಾನಕ್ಕೆ ಕಾರಣವಾಗಿತ್ತು. ಈ ಬಗ್ಗೆ ವಿಚಾರಿಸಲು ವಿದ್ಯಾಸಾಗರ ಬಳಿ ತೆರಳಿದ್ದ ಮೇಲಕೇರಿ,  ಅವರ ಕಪಾಳಕ್ಕೆ ಹೊಡೆದಿದ್ದರು. ಈ ಸಂಬಂಧ ಗುಲಬರ್ಗಾ ವಿಶ್ವವಿದ್ಯಾಲಯ ಠಾಣೆಯಲ್ಲಿಯೂ ಪ್ರಕರಣ ದಾಖಲಾಗಿದೆ’ ಎಂದು ವಿವಿ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.