ಸಂವಿಧಾನದ ಪ್ರತಿಗೆ ಬೆಂಕಿ;ಆರೋಪಿಗಳ ಬಂಧನಕ್ಕೆ ಒತ್ತಾಯ

7

ಸಂವಿಧಾನದ ಪ್ರತಿಗೆ ಬೆಂಕಿ;ಆರೋಪಿಗಳ ಬಂಧನಕ್ಕೆ ಒತ್ತಾಯ

Published:
Updated:
Deccan Herald

ಕಲಬುರ್ಗಿ: ಸಂವಿಧಾನದ ಪ್ರತಿಯನ್ನು ಸುಟ್ಟಿರುವ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ರಾಷ್ಟ್ರೀಯ ಬಸವ ಸೇನೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಸೋಮವಾರ ನಗರದಲ್ಲಿ ಪ್ರತಿಭಟನಾ ರ್‍ಯಾಲಿ ನಡೆಸಿದರು.

ತಲೆ ಮೇಲೆ ಸಂವಿಧಾನದ ಕೃತಿಯನ್ನು ಹೊತ್ತುಕೊಂಡು ಜಗತ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆಯಲ್ಲಿ ಸಾಗಿ ಗಮನ ಸೆಳೆದರು.

ನವದೆಹಲಿಯ ಜಂತರ್–ಮಂತರ್‌ನಲ್ಲಿ ಸಂವಿಧಾನದ ಪ್ರತಿಯನ್ನು ಸುಟ್ಟು ಹಾಕಿರುವುದು ದೇಶಕ್ಕೆ ದೊಡ್ಡ ಆಘಾತವಾಗಿದೆ. ಭಾರತದ ಸಂವಿಧಾನದ ರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಆದ್ದರಿಂದ ಸಂವಿಧಾನವನ್ನು ಸುಟ್ಟಂತಹ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ, ಗಡಿಪಾರು ಮಾಡಬೇಕು ಎಂಬ ಬೇಡಿಕೆಯುಳ್ಳ ಮನವಿಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

ಸುನಿಲ್ ಹುಡಗಿ, ಸತೀಶ ಸಜ್ಜನ, ನಾಗರಾಜ ಕಾಮಾ, ಮಹಾಂತೇಶ ಕಲಬುರ್ಗಿ, ಅಯ್ಯನಗೌಡ ಪಾಟೀಲ, ರವೀಂದ್ರ ಶಾಬಾದಿ, ಆರ್.ಜಿ.ಶೆಟಗಾರ್, ಪ್ರಭುಲಿಂಗ ಮಹಾಗಾಂವ, ಸೈಬಣ್ಣ ಜಮಾದಾರ ಇದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !