ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಕಾಲಕಾಲಕ್ಕೆ ಸರಿಯಾದ ಸಮಯದಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ ವೃಂದ ಮತ್ತು ನೇಮಕಾತಿ ನಿಯಮಗಳ ಅನ್ವಯ ಪ್ರೌಢಶಾಲೆಯ ಸ್ನಾತಕೋತ್ತರ ಪದವಿ ಪಡೆದ ಶಿಕ್ಷಕರಿಗೆ ಶೇಕಡ 50ರಷ್ಟು ಬಡ್ತಿ ಮೂಲಕ ಹುದ್ದೆಗಳನ್ನು ತುಂಬಲಾಗುತ್ತಿತ್ತು. ಆದರೆ ಕಳೆದ 13 ವರ್ಷಗಳಿಂದ ಬಡ್ತಿ ಪ್ರಕ್ರಿಯೆ ಸ್ಥಗಿತಗೊಂಡಿದೆ’ ಎಂದು ಹೇಳಿದ್ದಾರೆ.