ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಲ್ಲೆ ಖಂಡಿಸಿ ಮೌನ ಪ್ರತಿಭಟನೆ

Last Updated 5 ಮೇ 2021, 13:30 IST
ಅಕ್ಷರ ಗಾತ್ರ

ಶಹಾಬಾದ್: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಬುಧವಾರ ನಗರದ ಬಿಜೆಪಿ ಕಾರ್ಯಕರ್ತರು ಮೌನ ಪ್ರತಿಭಟನೆ ನಡೆಸಿ ಗ್ರೇಡ್-2 ತಹಶೀಲ್ದಾರ್‌ ವೆಂಕನಗೌಡ ಪಾಟೀಲ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಬಿಜೆಪಿ ಮುಖಂಡ ನಾಗರಾಜ ಮೇಲಗಿರಿ ಮಾತನಾಡಿ, ಪಶ್ಚಿಮ ಬಂಗಾಳದಲ್ಲಿ ಚುನಾವಣೆಯ ನಂತರ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ಹಲ್ಲೆಗಳು ಖಂಡನೀಯ ಎಂದು ತಿಳಿಸಿದರು.

ಚುನಾವಣೆಯ ಫಲಿತಾಂಶದ ನಂತರ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಹಲ್ಲೆ ಮಾಡುತ್ತಿರುವುದರ ಬಗ್ಗೆ ಕ್ರಮ ಕೈಗೊಳ್ಳಬೇಕು ಜೊತೆಗೆ ಬಿಜೆಪಿ ಕಾರ್ಯಕರ್ತರಿಗೆ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅರುಣ ಪಟ್ಟಣಕರ್, ಬಿಜೆಪಿ ಅವರು ಸ್ಥಳೀಯ ಸರ್ಕಾರ ಬಿಜೆಪಿ ಕಾರ್ಯಕರ್ತರ ರಕ್ಷಣೆ ಒತ್ತು ನೀಡದಿದ್ದಲ್ಲಿ ಮುಂದಿನ ದಿನಗಳಲ್ಲಿ ಯುವಮೋರ್ಚಾ ವತಿಯಿಂದ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಹಿಂಸಾಚಾರದ ವಿರುದ್ಧ ಭಿತ್ತಿ ಫಲಕಗಳನ್ನು ಪ್ರದರ್ಶನ ಮಾಡಿ ಮೌನ ಪ್ರತಿಭಟನೆ ನಡೆಸಿದರು.

ನಂತರ ಗ್ರೇಡ್-2 ತಹಸೀಲ್ದಾರ ವೆಂಕನಗೌಡ ಪಾಟೀಲ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸದಾನಂದ ಕುಂಬಾರ, ಸಿದ್ರಾಮ ಕುಸಾಳೆ,ಉಪಾಧ್ಯಕ್ಷ ಶ್ರೀಧರ ಜೋಶಿ, ಪ್ರಮುಖರಾದ ಅನಿಲ ಬೋರಗಾಂವಕರ,ನಿಂಗಣ್ಣ ಹುಳಗೋಳಕರ, ಶಂಕರ ಕುಂಬಾರ, ಶಿವಕುಮಾರ ರಾಮಶೆಟ್ಟಿ, ಯುವ ಮೋರ್ಚಾ ಅಧ್ಯಕ್ಷ ದಿನೇಶ ಗೌಳಿ, ಎಸ್‍ಸಿ ಮೋರ್ಚಾ ಅಧ್ಯಕ್ಷ ಸಂಜಯ ವಿಟ್ಕರ, ಶರಣು ಕವಲಗಿ, ಸುನೀಲ ಕುಂಬಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT