ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಟ ಪ್ರಕಾಶ್ ರಾಜ್ ವಿರುದ್ಧ ಕಲಬುರಗಿಯಲ್ಲಿ ಪ್ರತಿಭಟನೆ– ಸಂವಾದಕ್ಕೆ ವಿರೋಧ

‘ಗಾಯಗಳು’ ನಾಟಕ ಪ್ರದರ್ಶನ ಮತ್ತು ನಟ ಪ್ರಕಾಶ್ ರಾವ್ ಅವರೊಂದಿಗೆ ಸಂವಾದ ಕಾರ್ಯಕ್ರಮ
Published 10 ಸೆಪ್ಟೆಂಬರ್ 2023, 13:10 IST
Last Updated 10 ಸೆಪ್ಟೆಂಬರ್ 2023, 13:10 IST
ಅಕ್ಷರ ಗಾತ್ರ

ಕಲಬುರಗಿ: ಕಲಬುರಗಿ ನಗರದ ಡಾ.ಎಸ್‌.ಎಂ. ಪಂಡಿತ್ ರಂಗಮಂದಿರದಲ್ಲಿ ಆಯೋಜಿಸಿರುವ ಸಂವಾದಕ್ಕೆ ನಟ ಪ್ರಕಾಶ್ ರಾಜ್ ಅವರನ್ನು ಆಹ್ವಾನಿಸಿದ್ದನ್ನು ವಿರೋಧಿಸಿ ಹಿಂದೂ ಜಾಗೃತ ಸೇನೆ ಕಾರ್ಯಕರ್ತರು ಭಾನುವಾರ ಕಪ್ಪು ಬಟ್ಟೆ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.

ಹಿಂದೂ ಜಾಗೃತ ಸೇನೆ ಮುಖಂಡ ಲಕ್ಷ್ಮಿಕಾಂತ ಸ್ವಾದಿ ಸೇರಿದಂತೆ ಕೆಲವರು ಜಗತ್ ವೃತ್ತದಲ್ಲಿ ಜಮಾಯಿಸಿದರು.

ನಟ ಪ್ರಕಾಶ್ ರಾಜ್ ಅವರು ಕಲಬುರಗಿಗೆ ಬರದಂತೆ ನಿರ್ಬಂಧ ವಿಧಿಸಬೇಕು ಎಂದು ಆಗ್ರಹಿಸಿ ಕಪ್ಪು ಬಟ್ಟೆ ಪ್ರದರ್ಶಿಸಿದರು. ಜಗತ್ ವೃತ್ತದಲ್ಲಿ ಪ್ರತಿಭಟನಾಕಾರರನ್ನು ತಡೆದ ಪೊಲೀಸರು, ಅವರನ್ನು ವಶಕ್ಕೆ ಪಡೆದರು.

ಪ್ರಕಾಶ್ ರಾಜ್ ಅವರು ಕೋಮು ಭಾವನೆಗೆ ಧಕ್ಕೆ ತರುವಂತೆ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ. ಹೀಗಾಗಿ, ಕಲಬುರಗಿಗೆ ಬರುವುದಕ್ಕೆ ನಿರ್ಬಂಧ ಹೇರುವಂತೆ ನಿನ್ನೆ(ಶನಿವಾರ) ಮನವಿ ಸಲ್ಲಿಸಿದ್ದರು.

ಅಂತರಂಗ ಸಾಂಸ್ಕೃತಿಕ ಸೇವಾ ಸಂಸ್ಥೆ, ಸೂರ್ಯನಗರಿ ಸಾಂಸ್ಕೃತಿಕ ಕಲಾ ಸಂಘ, ರಂಗವೃಕ್ಷ ನಾಟಕ ನೃತ್ಯ ಸೇವಾ ಸಂಘ ಮತ್ತು ಕಲಬುರಗಿ ಆರ್ಟ್ ಥಿಯೇಟರ್ ವತಿಯಿಂದ ‘ಗಾಯಗಳು’ ನಾಟಕ ಪ್ರದರ್ಶನ ಮತ್ತು ನಟ ಪ್ರಕಾಶ್ ರಾವ್ ಅವರೊಂದಿಗೆ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT