ಚಿಂಚೋಳಿ: ಇಲ್ಲಿನ ಚಂದಾಪುರದಲ್ಲಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಎದುರು ಕರ್ನಾಟಕ ಕೃಷಿ ಹಾಗೂ ಗ್ರಾಮೀಣ ಕೂಲಿಕಾರರ ಸಂಘ ಧರಣಿ ನಡೆಸಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದು ಮೊಟ್ಟೆ ವಿತರಣೆ ಮತ್ತು ಮಿನಿ ಅಂಗನವಾಡಿ ಕಾರ್ಯಕರ್ತೆಯರ ಬಡ್ತಿಯಲ್ಲಿ ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿ, ತನಿಖೆ ನಡೆಸಿ ಶಿಸ್ತುಕ್ರಮ ಜರುಗಿಸಲು ಒತ್ತಾಯಿಸಿ ಜಿಲ್ಲಾ ಅಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ, ಜಿಲ್ಲಾ ಕಾರ್ಯದರ್ಶಿ ಮಲ್ಲಮ್ಮ ಕೋಡ್ಲಿ, ತಾಲ್ಲೂಕು ಅಧ್ಯಕ್ಷೆ ಜಗದೇವಿ ಚಂದನಕೇರಾ ನೇತೃತ್ವದಲ್ಲಿ ಧರಣಿ ನಡೆಸಿದರು.

ಅಸಮರ್ಪಕ ಆಹಾರ ಧಾನ್ಯ ಸರಬರಾಜಾಗುತ್ತಿದೆ. ಹೀಗಾಗಿ ಭ್ರಷ್ಟಾಚಾರದಲ್ಲಿ ತೊಡಗಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಸಿದ್ದಲ್ಲಿಂಗಯ್ಯ ಸ್ವಾಮಿ ಯಂಪಳ್ಳಿ, ನರಸಮ್ಮ ಚಂದನಕೇರಾ, ತುಳಜಪ್ಪ ರುಸ್ತಂಪುರ, ಭೀಮಶಾ ಕೊರಡಂಪಳ್ಳಿ, ಸಿದ್ದಪ್ಪ ಭೂತಾಳಿ, ಮಾರುತಿ ಐನೋಳ್ಳಿ, ಕವಿತಾ ಮೊದಲಾದವರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.