ಬುಧವಾರ, ನವೆಂಬರ್ 20, 2019
25 °C

ಸರ್ಕಾರದ ವೈಫಲ್ಯ ಖಂಡಿಸಿ ನಾಳೆ ಕಾಂಗ್ರೆಸ್‌ ಪ್ರತಿಭಟನೆ

Published:
Updated:

ಕಲಬುರ್ಗಿ: ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳ ವೈಫಲ್ಯ ಹಾಗೂ ಜನವಿರೋಧಿ ನೀತಿಯನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಇದೇ 9ರಂದು ಬೆಳಿಗ್ಗೆ 10.30ಕ್ಕೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಜಗತ್ ವೃತ್ತದಿಂದ ಮೆರವಣಿಗೆ ಮೂಲಕ ಹೊರಟು ಸರ್ದಾರ ವಲ್ಲಭಬಾಯಿ ಪಟೇಲ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿಗಳ ಕಚೇರಿವರೆಗೆ ತೆರಳಿ ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿಯವರಿಗೆ ಮನವಿ ಪತ್ರ ಸಲ್ಲಿಸಲಾಗುವದು. ಪಕ್ಷದ ಎಲ್ಲ ಜನಪ್ರತಿನಿಧಿಗಳು, ಎಲ್ಲ ಸದಸ್ಯರು ಭಾಗವಹಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಜಗದೇವ ಗುತ್ತೇದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)