ಕಲಬುರಗಿ: ಕಲ್ಕತ್ತಾದಲ್ಲಿ ಟ್ರೈನಿ ವೈದ್ಯೆ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ವಿಶ್ವ ಹಿಂದು ಪರಿಷದ್ ಹಾಗೂ ಮಾತೃ ಶಕ್ತಿ ಮತ್ತು ದುರ್ಗಾವಾಹಿನಿ ಸಂಘಟನೆ ಮಹಾನಗರ ಪಾಲಿಕೆ ಘಟಕದ ವತಿಯಿಂದ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

‘ಪಶ್ಚಿಮ ಬಂಗಾಳದಲ್ಲಿ ಹಿಂದೂ ಮಹಿಳೆಯರ ಮೇಲೆ ಬಲಾತ್ಕಾರಗಳು ನಡೆಯುತ್ತಲೇ ಇವೆ. ಇದನ್ನು ನೋಡಿ ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೌನವಾಗಿರುವುದು ಸರಿಯಲ್ಲ. ತೀವ್ರಗತಿಯಿಂದ ವಿಚಾರಣೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುವುದು ಬಿಟ್ಟು ತಾವೇ ಮೆರವಣಿಗೆ, ಪ್ರತಿಭಟನೆ ಮಾಡುತ್ತಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಮಹಿಳೆಯರ ಮೇಲೆ ನಡೆದ ದೌರ್ಜನ್ಯವನ್ನು ಪರಿಗಣಿಸಿ ಕೇಂದ್ರ ಸರ್ಕಾರ ಮಮತಾ ಬ್ಯಾನರ್ಜಿ ಸರ್ಕಾರ ತೆಗೆದು ಹಾಕಿ ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು’ ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ಕಾರ್ಯದರ್ಶಿ ಅಶ್ವಿನಕುಮಾರ್, ಜಿಲ್ಲಾ ಉಪಾಧ್ಯಕ್ಷೆ ಸುಮಂಗಲಾ ಚಕ್ರವರ್ತಿ, ಮೃಣಾಲ ಜಾಗೀರದಾರ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.