ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅತ್ಯಾಚಾರ, ಕೊಲೆ ಖಂಡಿಸಿ ಪ್ರತಿಭಟನೆ

Published 23 ಆಗಸ್ಟ್ 2024, 6:55 IST
Last Updated 23 ಆಗಸ್ಟ್ 2024, 6:55 IST
ಅಕ್ಷರ ಗಾತ್ರ

ಕಲಬುರಗಿ: ದೇಶದಾದ್ಯಂತ ನಡೆಯುತ್ತಿರುವ ಅತ್ಯಾಚಾರ, ಹಿಂಸೆ, ಕೊಲೆಯನ್ನು ಖಂಡಿಸಿ ಜನತಾ ಪರಿವಾರ ಸಂಘಟನೆ ಜಿಲ್ಲಾ ಘಟಕದ ವತಿಯಿಂದ ನಗರದ ಸರ್ದಾರ್ ವಲ್ಲಭಬಾಯಿ ಪಟೇಲ್‌ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.

ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಸಿರಾಜ್‌ ಶಾಬ್ದಿ ಮಾತನಾಡಿ, ‘ದೇಶದಲ್ಲಿ ಪ್ರತಿ 16 ನಿಮಿಷಕ್ಕೆ ಒಂದು ಅತ್ಯಾಚಾರ ಪ್ರಕರಣ ದಾಖಲಾಗುತ್ತಿದೆ. ಕೊಲೆ ಪ್ರಕರಣಗಳು ಸಹ ಹೆಚ್ಚಾಗುತ್ತಿವೆ. ಅದನ್ನು ತಡೆಯಲು ಕೇಂದ್ರ ಬಿಜೆಪಿ ಸರ್ಕಾರ ವಿಫಲವಾಗಿದೆ. ಭಾರತವು ಮಹಿಳೆಯರಿಗೆ ವಿಶ್ವದ ಅತ್ಯಂತ ಅಪಾಯಕಾರಿ ದೇಶಗಳಲ್ಲಿ ಒಂದಾಗಿದೆ ಎಂದು ತಿಳಿದುಬಂದಿದೆ’ ಎಂದು ಹೇಳಿದರು.

‘ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ 2014ರಿಂದ 2023ರವರೆಗೆ ದೇಶದಲ್ಲಿ 3.50 ಲಕ್ಷ ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಭಾರತ ನಾಗರಿಕ ಸಂಹಿತೆಯಲ್ಲಿ ಅತ್ಯಾಚಾರ ಆರೋಪಿಗಳಿಗೆ ಕಡ್ಡಾಯವಾಗಿ ಜೀವಾವಧಿ ಶಿಕ್ಷೆ ವಿಧಿಸುವಂತೆ ತಿದ್ದುಪಡಿ ಕಾನೂನು ತರಬೇಕು’ ಎಂದು ಆಗ್ರಹಿಸಿದರು.

‘ಜಿಲ್ಲೆಯಲ್ಲಿಯೂ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ. ಜಿಲ್ಲಾಡಳಿತ ಹಾಗೂ ಪೊಲೀಸ್‌ ಇಲಾಖೆ ವಿದ್ಯಾರ್ಥಿನಿಯರು ಹಾಗೂ ಯುವತಿಯರಿಗೆ ಸ್ವಯಂ ರಕ್ಷಣಾ ತರಬೇತಿ ನೀಡಬೇಕು. ಪೊಲೀಸ್‌ ಇಲಾಖೆಯು ಶಾಲಾ ಕಾಲೇಜುಗಳಲ್ಲಿ ಶಿಬಿರ ಮಾಡುವ ಮೂಲಕ ಹೆಚ್ಚಿನ ಜಾಗೃತಿ ಮೂಡಿಸಬೇಕು’ ಎಂದು ಆಗ್ರಹಿಸಿದರು.

ಈ ವೇಳೆ ರಾಷ್ಟ್ರಪತಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗೆ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಸಂಘಟನೆಯ ಶೇಖ್‌ ಸೈಫನ್‌, ಆಕಾಶ ರಿಡ್ಲಾನ್‌, ಕೃಷ್ಣಾ ಸರಡಗಿ, ಅಜರ್‌ ಮುಬಾರಕ್‌, ಸಾಬೀರ್‌ ಬಾರಿ, ಫಾತೀಮಾ ಪಟೇಲ್‌, ನಿಲೋಫರ್ ಹಕ್ಕಿಮ್‌, ಆಸೀಯಾ ಬೇಗಂ, ಶಬಾನಾ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT