ಪ್ರತ್ಯೇಕ ರಾಜ್ಯ ಬೇಡಿಕೆ ವಿರೋಧಿಸಿ ಪ್ರತಿಭಟನೆ

7

ಪ್ರತ್ಯೇಕ ರಾಜ್ಯ ಬೇಡಿಕೆ ವಿರೋಧಿಸಿ ಪ್ರತಿಭಟನೆ

Published:
Updated:
Deccan Herald

ಕಲಬುರ್ಗಿ: ಪ್ರತ್ಯೇಕ ರಾಜ್ಯ ಬೇಡಿಕೆ ವಿರೋಧಿಸಿ ಹೈದರಾಬಾದ್ ಕರ್ನಾಟಕ ಕನ್ನಡ ಪರ ಸಂಘಟನೆ ಒಕ್ಕೂಟದ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ಮಾಡಿದರು.

ಮುಂಬಯಿ ಕರ್ನಾಟಕದವರು ಬೇಕಿದ್ದರೆ ಪ್ರತ್ಯೇಕ ರಾಜ್ಯ ಬೇಡಿಕೆ ಇಡಲಿ. ಆದರೆ, ಹೈದರಾಬಾದ್ ಕರ್ನಾಟಕ ಭಾಗದ ಆರು ಜಿಲ್ಲೆಗಳನ್ನು ಒಳಗೊಂಡಂತೆ ಪ್ರತ್ಯೇಕ ರಾಜ್ಯ ಬೇಡಿಕೆಗೆ ನಮ್ಮ ವಿರೋಧವಿದೆ. 371 (ಜೆ) ಕಾಯ್ದೆಯಡಿ ಈಗಷ್ಟೇ ಅದರ ಲಾಭ ಪಡೆಯುತ್ತಿದ್ದೇವೆ. ಈ ಹಂತದಲ್ಲಿ ಭಾವನಾತ್ಮಕ ವಿಷ ಬೀಜವನ್ನು ಬಿತ್ತಿ, ಪ್ರತ್ಯೇಕ ರಾಜ್ಯ ಬೇಡಿಕೆ ಇಟ್ಟಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಗನ್ನಾಥ ಸೂರ್ಯವಂಶಿ, ಸಚಿನ್ ಫರಹತಾಬಾದ್, ಮಂಜುನಾಥ ನಾಲವಾರಕರ್, ನಂದಕುಮಾರ ನಾಗಭುಜಂಗೆ, ಅಮೃತ ಪಾಟೀಲ, ದತ್ತು ಭಾಸಗಿ ಇದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !