ಭಾನುವಾರ, ಆಗಸ್ಟ್ 1, 2021
22 °C
ಕಲ್ಯಾಣ ಕರ್ನಾಟಕ ವೃಂದದ ನೇರ ನೇಮಕಾತಿ ಪ್ರಕ್ರಿಯೆಗೆ ಸರ್ಕಾರದಿಂದ ತಡೆ

ಕಲಬುರ್ಗಿ: ಜನಪ್ರತಿನಿಧಿಗಳ ರಾಜೀನಾಮೆಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಕಲ್ಯಾಣ ಕರ್ನಾಟಕ ವೃಂದದ ನೇರನೇಮಕಾತಿ ಪ್ರಕ್ರಿಯೆ ತಡೆ ಹಿಡಿದ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸದೇ ಸುಮ್ಮನಿರುವ ಜನಪ್ರತಿನಿಧಿಗಳು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ, ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕಲ್ಯಾಣ ಕರ್ನಾಟಕ ಸೈನ್ಯದ ಪದಾಧಿಕಾರಿಗಳು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

‘ಕಲ್ಯಾಣ ಕರ್ನಾಟಕ ಪ್ರದೇಶದ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು ರಾಜೀನಾಮೆ ನೀಡಿ ಮನೆಗೆ ಹೋಗಬೇಕು. ಕೊರೊನಾ ನೆಪದಲ್ಲಿ ಆರ್ಥಿಕ ಮುಗ್ಗಟ್ಟಿನಿಂದ ನೇಮಕಾತಿ ತಡೆಹಿಡಿಯಲಾಗಿದೆ ಎಂಬ ಮಾತನ್ನು ಒಪ್ಪುವುದಿಲ್ಲ. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಮೇಲಿಂದ ಮೇಲೆ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ’ ಎಂದು ಟೀಕಿಸಿದರು.

‘ಸರ್ಕಾರದ ಕಲ್ಯಾಣ ಕರ್ನಾಟಕ ವಿರೋಧಿ ಧೋರಣೆಯನ್ನು ಖಂಡಿಸಿ ಎಲ್ಲ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು ಮುಖ್ಯವಾಗಿ ಬಿಜೆಪಿ ಜನಪ್ರತಿನಿಧಿಗಳು ಕೂಡಲೇ ರಾಜೀನಾಮೆ ನೀಡಬೇಕು’ ಎಂದು ಹೋರಾಟ ಸಮಿತಿ ಅಧ್ಯಕ್ಷ ಎಂ.ಎಸ್.ಪಾಟೀಲ ನರಿಬೋಳ ಒತ್ತಾಯಿಸಿದರು.

ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಶಿವಲಿಂಗ ಹಳಿಮನಿ, ಕಲ್ಯಾಣ ಕರ್ನಾಟಕ ಸೇನೆ ಅಧ್ಯಕ್ಷ ದತ್ತು ಹೈಯ್ಯಾಳ ಕರ್ ಶ್ರೀರಾಮ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮಿಕಾಂತ ಸ್ವಾದಿ, ತಾತಗೌಡ ಪಾಟೀಲ, ರಾಜು ಕಣಸೂರು, ಕಾಳಪ್ಪ ಪೂಜಾರಿ, ಗೌರಂಪಲ್ಲಿ, ಶ್ರೀದೇವಿ ಮುತ್ತಂಗಿ, ಮುತ್ತಣ್ಣ ಬಾಗೋಡಿ, ಮಹೇಶ್ ಗೊಬ್ಬುರ,  ಮಲ್ಲು ಮೋಟಗಿ, ಆನಂದ್, ಸಂಗು ಕಾಡನೂರು ಮರಿಲಿಂಗ ಏಣಗಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು