ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರ್ಗಿ: ಬಸವೇಶ್ವರರ ಪ್ರತಿಮೆ ‌ವಿರೂಪ‌ ಖಂಡಿಸಿ ಪ್ರತಿಭಟನೆ

Last Updated 9 ನವೆಂಬರ್ 2020, 8:40 IST
ಅಕ್ಷರ ಗಾತ್ರ

ಕಲಬುರ್ಗಿ: ಬೆಳಗಾವಿ ‌ಜಿಲ್ಲೆ ರಾಮದುರ್ಗ ತಾಲ್ಲೂಕಿನ ‌ಬಿಜಗುಪ್ಪಿ ಗ್ರಾಮದಲ್ಲಿ ಬಸವೇಶ್ವರರ ಪ್ರತಿಮೆಯನ್ನು ವಿರೂಪಗೊಳಿಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ‌ಎಂದು ಆಗ್ರಹಿಸಿ ಅಖಿಲ‌ ಭಾರತ ವೀರಶೈವ ‌ಮಹಾಸಭಾ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ‌ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

'ವಿಶ್ವಗುರು ಬಸವೇಶ್ವರರ ಪ್ರತಿಮೆ ಭಗ್ನ ಮಾಡಿರುವುದು ಅಕ್ಷಮ್ಯ. ಇಡೀ ಮನುಕುಲಕ್ಕೆ ಮಾನವತೆಯ ಸಂದೇಶ ಸಾರಿದ, ಸಮ ಸಮಾಜದ ಪರಿಕಲ್ಪನೆಯನ್ನು ಕಟ್ಟಿಕೊಟ್ಟ 12ನೇ ಶತಮಾನದ ಕ್ರಾಂತಿಪುರುಷ ಬಸವೇಶ್ವರರು ಜಗತ್ತಿಗೇ ಆದರ್ಶರಾಗಿದ್ದಾರೆ. ಇಂಗ್ಲೆಂಡ್ ನಲ್ಲಿಯೂ ಬಸವಣ್ಣನವರ ಪ್ರತಿಮೆ ಸ್ಥಾಪಿಸಿ ಗೌರವಿಸಲಾಗಿದೆ. ಇಂಥ ಮಹಾಮಹಿಮರ ಪ್ರತಿಮೆ ಭಗ್ನಗೊಳಿಸಿರುವುದು ನಿಜಕ್ಕೂ ದುರ್ದೈವ. ಕಿಡಿಗೇಡಿಗಳನ್ನು ಪತ್ತೆ ಮಾಡಿ ಸರ್ಕಾರ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಎಲ್ಲ ಪ್ರತಿಮೆಗಳ ಬಳಿ ಸಿ.ಸಿ. ಟಿವಿ ಕ್ಯಾಮೆರಾ ಅಳವಡಿಸುವ ಕಾರ್ಯ ಆಗಬೇಕು. ನಿರ್ಲಕ್ಷ ಮಾಡಿದರೆ ರಾಜ್ಯದಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು

ಮಹಾಸಭಾ ಯುವ ಘಟಕದ ಅಧ್ಯಕ್ಷ ಉದಯ ಪಾಟೀಲ, ಜಿಲ್ಲಾ ಗೌರವ ಅಧ್ಯಕ್ಷ ಎಂ.ಎಸ್. ಪಾಟೀಲ ನರಿಬೋಳ, ರಾಜುಗೌಡ ನಾಗನಹಳ್ಳಿ, ಮಹೇಶ್ವರಿ ವಾಲಿ, ಮಹೇಶ್ ಕೆ.ಪಾಟೀಲ, ತಾತ ಗೌಡ ಪಾಟೀಲ, ಮಂಜುನಾಥ ಅಂಕಲಗಿ, ಸಾಹೇಬಗೌಡ ಪಾಟೀಲ, ಶರಣ ಅವಂತಿ, ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಶಿವರಾಜ ಅಂಡಗಿ, ವೀರೇಶ ನೀಲಾ, ವೀರೇಂದ್ರ ಮಂಟಾಳೆ, ಮಲ್ಲಿಕಾರ್ಜುನ ಪಾಟೀಲ, ಲಕ್ಷ್ಮಿಕಾಂತ ಸ್ವಾದಿ, ಅಂಬು ಕೇದರನಾಥ, ಶರಣು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT