ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಂಗನವಾಡಿಗಳಲ್ಲಿಯೇ ಎಲ್‌ಕೆಜಿ, ಯುಕೆಜಿ: ಸಚಿವ ಪ್ರಿಯಾಂಕ್ ಖರ್ಗೆ ಮನೆ ಮುಂದೆ ಧರಣಿ

ಅಂಗನವಾಡಿಗಳಲ್ಲಿಯೇ ಎಲ್‌ಕೆಜಿ, ಯುಕೆಜಿ ಆರಂಭಕ್ಕೆ ವಿರೋಧ
Published 17 ಜೂನ್ 2024, 15:57 IST
Last Updated 17 ಜೂನ್ 2024, 15:57 IST
ಅಕ್ಷರ ಗಾತ್ರ

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅಡಿಯಲ್ಲಿ ಎಲ್‌ಕೆಜಿ, ಯುಕೆಜಿಯನ್ನು ಪ್ರಾರಂಭಿಸುವ ಆದೇಶ ಹಿಂಪಡೆದು, 1008 ಅಂಗನವಾಡಿ ಕೇಂದ್ರಗಳನ್ನು ಗುರುತಿಸಿ ಅಲ್ಲಿಯೇ ಈ ತರಗತಿಗಳನ್ನು ಪ್ರಾರಂಭ ಮಾಡುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯ ಸಮಿತಿಯ ಜಿಲ್ಲಾ ಮುಖಂಡರು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಮನೆಯ ಮುಂದೆ ಸೋಮವಾರ ಧರಣಿ ಕುಳಿತಿದ್ದಾರೆ.

ಎಲ್‌ಕೆಜಿ, ಯುಕೆಜಿ ಪ್ರಾರಂಭಿಸುವ ಆದೇಶ ಹಿಂಪಡೆಯುವಂತೆ ಆಗ್ರಹಿಸಿ ಜೂನ್ 19ರ ವರೆಗೆ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಸಚಿವರ ಮನೆಯ ಮುಂದೆ ಕುಳಿತ ಧರಣಿ ನಡೆಸಲಾಗುವುದು ಎಂದು ಕೆಪಿಆರ್‌ಎಸ್‌ ಜಿಲ್ಲಾ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಹೇಳಿದರು.

ಎಲ್‌ಕೆಜಿ, ಯುಕೆಜಿ ಪ್ರಾರಂಭ ಆದೇಶ ನಿಲ್ಲಿಸಬೇಕು. ಈಗಾಗಲೇ ಶಿಕ್ಷಣ ಇಲಾಖೆಯಡಿಯಲ್ಲಿರುವ ಎಲ್‌ಕೆಜಿ, ಯುಕೆಜಿ ಮತ್ತು ಕೆಪಿಎಸ್‌ ಶಾಲೆಗಳಲ್ಲಿ ಮಕ್ಕಳ ಒಟ್ಟು ಸ್ಥಿತಿಯ ಬಗ್ಗೆ ಅಧ್ಯಯನ ಮಾಡಬೇಕು. ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿಯಲ್ಲಿರುವ ಮಕ್ಕಳ ಸ್ಥಿತಿ–ಗತಿ ಬಗ್ಗೆ ಅಧ್ಯಯನ ಮಾಡಬೇಕು ಎಂದು ಧರಣಿ ನಿರತರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಘದ ಕಾರ್ಯಾಧ್ಯಕ್ಷೆ ಶಾಂತಾ ಎಸ್‌.ಘಂಟೆ, ಜಿಲ್ಲಾ ಅಧ್ಯಕ್ಷೆ ಗೌರಮ್ಮ ಪಿ. ಪಾಟೀಲ, ಖಜಾಂಚಿ ಮಹಾದೇವಿ ಕುಡಳ್ಳಿಕರ, ಸಿಪಿಐ (ಎಂ) ಜಿಲ್ಲಾ ಕಾರ್ಯದರ್ಶಿ ಕೆ.ನೀಲಾ, ಶರಣಬಸಪ್ಪ ಮಮಶೆಟ್ಟಿ, ಪ್ರಮುಖರಾದ ದೇವಮ್ಮ ಅನ್ನದಾನಿ, ರಾಧಾ ಲಕ್ಕನೂರ, ಸಾಬಮ್ಮ ಎಂ. ಕಾಳಗಿ ಸೇರಿ ಹಲವರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT