ಜೇವರ್ಗಿ: ತಾಲ್ಲೂಕು ಹಾಗೂ ಪಟ್ಟಣದಲ್ಲಿ ಪರವಾನಗಿ ಇಲ್ಲದೆ ಮದ್ಯವನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ. ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಸಂಘಟನೆಯ ತಾಲ್ಲೂಕು ಅಧ್ಯಕ್ಷ ಸಿದ್ಧಲಿಂಗ ಪೂಜಾರಿ ಹಾಲಗಡ್ಲಾ ಆಗ್ರಹಿಸಿದ್ದಾರೆ.

ತಾಲ್ಲೂಕಿನಲ್ಲಿ ಪರವಾನಗಿ ಇಲ್ಲದೆ ಮದ್ಯವನ್ನು ಅಕ್ರಮ ಮಾರಾಟ ಜೋರಾಗಿ ನಡೆಯುತ್ತಿದೆ. ಅಧಿಕಾರಿಗಳು ಕಣ್ಣಮುಚ್ಚಿ ಕುಳಿತುಕೊಂಡಿದ್ದಾರೆ. ಕೂಡಲೇ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕಬೇಕು. ಪರವಾನಗಿ ಪಡೆಯದೆ ಮದ್ಯ ಮಾರಾಟ ಮಾಡುವವರ ವಿರುದ್ಧ ಒಂದು ವಾರದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸದಿದ್ದರೆ ಸಂಘಟನೆ ವತಿಯಿಂದ ಅಬಕಾರಿಗೆ ಇಲಾಖೆಗೆ ಬೀಗ ಹಾಕಿ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕಿರಣ ಸರಡಗಿ, ಮಲ್ಲಣ್ಣಗೌಡ ಪೊಲೀಸ ಪಾಟೀಲ, ಮೌನೇಶ ನರಿಬೋಳ, ರವಿ ಮಿಣಜಗಿ, ಜಯಶ್ರೀ ಅವರಾದ, ಭೀಮಬಾಯಿ ಅವರಾದ, ಸಿದ್ದಮ್ಮ ಅವರಾದ, ಪವಿತ್ರ ಪಾಟೀಲ ಸೇರಿದಂತೆ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.