ಖರ್ಗೆಗೆ ಬೆದರಿಕೆ: ದುಷ್ಕರ್ಮಿಗಳನ್ನು ಬಂಧಿಸಲು ವಾಡಿ ಬ್ಲಾಕ್ ಕಾಂಗ್ರೆಸ್ ಮುಖಂಡ

ವಾಡಿ: ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜೀವ ಬೆದರಿಕೆ ಒಡ್ಡಿದ ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೆಹಮೂದ್ ಸಾಹೇಬ್ ಒತ್ತಾಯಿಸಿದರು.
‘ಕೇಂದ್ರ ಸರ್ಕಾರದ ಸರ್ವಾಧಿಕಾರದ ನೀತಿ ಖಂಡಿಸಿದ್ದಕ್ಕೆ ಖರ್ಗೆ ಅವರಿಗೆ ಬಿಜೆಪಿ, ಆರ್‌ಎಸ್‌ಎಸ್, ಭಜರಂಗ ದಳದಂತಹ ಸಂಘಟನೆಯವರು ಬೆದರಿಕೆ ಒಡ್ಡುತ್ತಿದ್ದಾರೆ. ತಪ್ಪಿತಸ್ಥರನ್ನು ಪತ್ತೆ ಮಾಡಿ, ಅವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು’ ಎಂದು ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು.
‘ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆಯಿಲ್ಲದ ಖರ್ಗೆ ಅವರು ಜವಾಬ್ದಾರಿಯುತ ಕಾರ್ಯನಿರ್ವಹಿಸುತ್ತಿದ್ದಾರೆ. ಯಾವುದೇ ಅಧಿಕಾರರೂಢ ಪಕ್ಷವನ್ನು ಟೀಕಿಸುವುದು ಸಂವಿಧಾನದತ್ತ ಹಕ್ಕು ಆಗಿದೆ’ ಎಂದರು.
‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಮಾರಾಟ ಮಾಡುತ್ತಿದೆ ಅಲ್ಲದೇ ಬಂಡವಾಳಶಾಹಿಗಳನ್ನು ಪ್ರೋತ್ಸಾಹಿ ಸುತ್ತಿದೆ. ಕೇಂದ್ರ ಸರ್ಕಾರದ ದೋರಣೆ ವಿರುದ್ಧ ಪಕ್ಷದ ವತಿಯಿಂದ ಹೋರಾಟ ನಡೆಸಲಾಗುವುದು’ ಎಂದು ಅವರು ತಿಳಿಸಿದರು.
ಪಕ್ಷದ ಮುಖಂಡರಾದ ಟೋಪಣ್ಣ ಕೋಮಟೆ, ಶಂಕ್ರಯ್ಯಾ ಸ್ವಾಮಿ ಮದ್ರಿ, ಭೀಮರಾವ ದೊರಿ, ಮಹ್ಮದ್ ಅಶ್ರಫ್ ಖಾನ, ಚಾಂದ್ ಮಿಯ್ಯಾ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.