ಮಂಗಳವಾರ, ಏಪ್ರಿಲ್ 20, 2021
32 °C

ಕಲಬುರ್ಗಿ: ಪ್ರತಿಭಟನೆ ವೇಳೆಯೇ ಜಿಲ್ಲಾಧಿಕಾರಿ ಕಚೇರಿ ಎದುರೇ ಕ್ರಿಮಿನಾಶಕ ಸೇವನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಕಲ್ಯಾಣ ಕರ್ನಾಟಕ ಅನುದಾನರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದಿಂದ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ನಡೆದ ಪ್ರತಿಭಟನೆ ವೇಳೆ, ಜೇವರ್ಗಿ ತಾಲ್ಲೂಕು ಸುಂಬಡ ಗ್ರಾಮದ ಸಿದ್ಧಗಂಗಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪ್ರಕಾಶ ಸುಂಬಡ ಕ್ರಿಮಿನಾಶಕ ಕುಡಿದು ಆತ್ಮಹತ್ಯೆಗೆ ಯತ್ನಿಸಿದರು.

ಸೇಡಂನ ವಿಶ್ವಗಂಗಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಂಕರ ಬಿರಾದರ (49) ಅವರು ಸಾಲ ಬಾಧೆ ತಾಳದೇ ಕಲಬುರ್ಗಿಯಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಾವಿಗೆ ಸರ್ಕಾರದ ಧೋರಣೆಯೇ ಕಾರಣ ಎಂದು ಆರೋಪಿಸಿ, ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಮಧ್ಯಾಹ್ನದವರೆಗೂ ಜಿಲ್ಲಾಧಿಕಾರಿ, ಜನಪ್ರತಿನಿಧಿಗಳು ಸ್ಥಳಕ್ಕೆ ಬರಲಿಲ್ಲ. ಇದರಿಂದ ಪ್ರತಿಭಟನಾಕಾರರು ತೀವ್ರ ಆಕ್ರೋಶಗೊಂಡರು. ನಂತರ ಬಂದ ವಿಧಾನ ಪರಿಷತ್‌ ಸದಸ್ಯ ಶಶೀಲ್‌ ನಮೋಶಿ, ಪ್ರತಿಭಟನಾಕಾರರ ದೂರು ಆಲಿಸುತ್ತಿದ್ದರು.

ಪ್ರತಿಭಟನೆಯಲ್ಲಿದ್ದ  ಪ್ರಕಾಶ, ಬೈಕ್‌ನಲ್ಲಿ ಮಾರುಕಟ್ಟೆಗೆ ಹೋಗಿ ಕ್ರಿಮಿನಾಶಕ ತಂದು ಕುಡಿದರು. ಎರಡು ಗುಟುಕು ಕುಡಿಯುತ್ತಿದ್ದಂತೆ ಜೊತೆಗಿದ್ದವರು ಬಾಟಲಿ ಕಿತ್ತಿಕೊಂಡರೂ ಬಿಡದೇ ತಲೆ– ಮುಖದ ಮೇಲೆಲ್ಲ ಚೆಲ್ಲಾಡಿಕೊಂಡರು. ಅಸ್ವಸ್ಥರಾದ ಅವರನ್ನು ಪೊಲೀಸ್‌ ವಾಹನದಲ್ಲೇ ಜಿಮ್ಸ್‌ಗೆ ದಾಖಲಿಸಲಾಯಿತು.

ಕಲ್ಯಾಣ ಕರ್ನಾಟಕ ಭಾಗದ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ವೇತನಾನುದಾನ ನೀಡಬೇಕು ಎಂದು ಆಗ್ರಹಿಸಿ ಒಕ್ಕೂಟದಿಂದ ನಿರಂತರ ಹೋರಾಟ ನಡೆದಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು