ಮಂಗಳವಾರ, ಸೆಪ್ಟೆಂಬರ್ 27, 2022
27 °C

ಶಿಕ್ಷಣ ನೀತಿ ವಿರೋಧಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರಗಿ: ಈಶ್ವರಚಂದ್ರ ವಿದ್ಯಾಸಾಗರ ಅವರ ಸ್ಮರಣ ದಿನದ ಅಂಗವಾಗಿ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ (ಎಐಎಸ್‍ಇಸಿ) ವತಿಯಿಂದ ಸಾರ್ವಜನಿಕ ಶಿಕ್ಷಣ ಉಳಿಸಿ ದಿನ ಆಚರಿಸಲಾಯಿತು.

ಇದೇ ವೇಳೆ ನೂತನ ಶಿಕ್ಷಣ ನೀತಿ ವಿರೋಧಿಸಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಜಿಲ್ಲಾ ಸಮಿತಿ ಕಾರ್ಯದರ್ಶಿ ರಾಮಣ್ಣ ಎಸ್.ಇಬ್ರಾಹಿಂಪುರ ಮಾತನಾಡಿ, ‘ನೂತನ  ಶಿಕ್ಷಣ  ನೀತಿ  ಜನವಿರೋಧಿಯಾಗಿದೆ.  ಇದರ ಹಿಂದೆ ಶಿಕ್ಷಣ ಕ್ಷೇತ್ರವನ್ನು ಹಾಳು ಮಾ ಡುವ ಹುನ್ನಾರ ಅಡಗಿದೆ. ಬಂಡವಾಳಶಾಹಿಗಳ ಸೇವೆಗಾಗಿ ವಿದ್ಯಾರ್ಥಿಗಳನ್ನು ಬಲಿಪಶು ಮಾಡಲಾಗುತ್ತಿದೆ’ ಎಂದು ಆರೋಪಿಸಿದರು.

ಶಿಕ್ಷಣ ನೀತಿಗಳು ಎಲ್ಲರಿಗೂ ಶಿಕ್ಷಣ ದೊರಕಿಸುವ ಉದ್ದೇಶ ಹೊಂದಿರಬೇಕು. ಆದರೆ ನೂತನ ನೀತಿ ಬಡವರಿಗೆ ಶಿಕ್ಷಣ ಕ್ಷೇತ್ರದ ಬಾಗಿಲುಗಳನ್ನು ಮುಚ್ಚುತ್ತದೆ. ಚರ್ಚೆ ಇಲ್ಲ ದೆ ಕಾಯ್ದೆಗಳನ್ನು ಜಾರಿಗೆ ತಂದರೆ ಇಂಥ ಅಪಾಯ ಆಗುವ ಸಾಧ್ಯತೆ ಇರುತ್ತದೆ. ಈ ಹುನ್ನಾರದ ವಿರುದ್ಧ ಎಲ್ಲರೂ ಒಗ್ಗೂಡಬೇಕು. ಪ್ರತಿಭಟಿಸಬೇಕು ಎಂದು ಹೇಳಿದರು.

ಜಿಲ್ಲಾ ಸಮಿತಿ ಸದಸ್ಯರಾದ ವಿಶಾಲಾಕ್ಷಿ ಪಾಟೀಲ, ಜಾನಕಿ ಎಸ್.ಗುದ್ದಿ, ಶಿವಕುಮಾರ ಕುಸಾಳೆ ಹಾಗೂ ವಿಜಯಾ ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು