ಅತ್ಯಾಚಾರ ಖಂಡಿಸಿ ಪ್ರತಿಭಟನೆ

7

ಅತ್ಯಾಚಾರ ಖಂಡಿಸಿ ಪ್ರತಿಭಟನೆ

Published:
Updated:
Deccan Herald

ಕಲಬುರ್ಗಿ: ಕೋಲಾರ ಜಿಲ್ಲೆ ಮಾಲೂರಿನಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವುದನ್ನು ಖಂಡಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್‌ಎಸ್‌), ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಹಾಗೂ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್‌ಒ) ಸಂಘಟನೆಗಳ ಕಾರ್ಯಕರ್ತರು ಹಾಗೂ ಕಾಲೇಜು ವಿದ್ಯಾರ್ಥಿನಿಯರು ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಶನಿವಾರ ಪ್ರತಿಭಟನೆ ಮಾಡಿದರು.

ಹೋಬಳಿ ಮಟ್ಟದ ಕ್ರೀಡಾಕೂಟ ಮುಗಿಸಿಕೊಂಡು ಸ್ನೇಹಿತೆಯರ ಜತೆ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ಖಂಡನೀಯ. ಚಿಕ್ಕ ಮಕ್ಕಳು ಮತ್ತು ಮಹಿಳೆಯರ ಮೇಲೆ ಅತ್ಯಾಚಾರ ಎಸಗುವ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಅತ್ಯಾಚಾರಿಗಳಿಗೆ ಕುಮ್ಮಕ್ಕು ನೀಡುತ್ತಿರುವ ಅಶ್ಲೀಲ ಅಂತರ್ಜಾಲತಾಣಗಳು, ಸಿನಿಮಾ, ವಿಡಿಯೋಗಳನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿದರು.

ದೇಶದಾದ್ಯಂತ ಅತ್ಯಾಚಾರ ಪ್ರಕರಣಗಳು ತೀವ್ರವಾಗುತ್ತಿವೆ. ಹೆಣ್ಣು ಮಕ್ಕಳಿಗೆ ರಕ್ಷಣೆ ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಬೇಕು. ನಿರ್ಭಯಾ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ವರ್ಮಾ ಸಮಿತಿಯ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಎಐಎಂಎಸ್‌ಎಸ್‌ ಜಿಲ್ಲಾ ಸಮಿತಿ ಸದಸ್ಯೆ ಗೌರಮ್ಮ ಎಸ್.ಕೆ., ಎಐಡಿಎಸ್‌ಒ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿನಾಥ ಸಿಂಗೆ, ಈರಣ್ಣ ಇಸಬಾ ಇದ್ದರು.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !