ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಲಬುರಗಿ | ಪಿಎಸ್‌ಐ ಪರಶುರಾಮ್ ಸಾವು: ಸಿಬಿಐ ತನಿಖೆಗೆ ಆಗ್ರಹ

ರಿಪಬ್ಲಿಕನ್‌ ಪಾರ್ಟಿ ಆಫ್‌ ಇಂಡಿಯಾ (ಆಠವಲೆ) ಪಕ್ಷ ಜಿಲ್ಲಾ ಘಟಕದಿಂದ ಪ್ರತಿಭಟನೆ
Published : 7 ಆಗಸ್ಟ್ 2024, 14:37 IST
Last Updated : 7 ಆಗಸ್ಟ್ 2024, 14:37 IST
ಫಾಲೋ ಮಾಡಿ
Comments

ಕಲಬುರಗಿ: ವಾಲ್ಮಿಕಿ ಅಭಿವೃದ್ಧಿ ನಿಗಮದ ಹಗರಣ, ಎಸ್‌ಸಿಎಸ್‌ಪಿ, ಟಿಎಸ್‌ಪಿ ಮೀಸಲು ಹಣ ದುರ್ಬಳಕೆ, ಮುಡಾ ಹಗರಣ ಹಾಗೂ ಯಾದಗಿರಿ ನಗರದ ಪೊಲೀಸ್‌ ಠಾಣೆಯ ಪಿಎಸ್‌ಐ ಪರಶುರಾಮ್‌ ಸಾವು ಪ್ರಕರಣದ ಸಿಬಿಐ ತನಿಖೆಗೆ ಒತ್ತಾಯಿಸಿ ರಿಪಬ್ಲಿಕನ್‌ ಪಾರ್ಟಿ ಆಫ್‌ ಇಂಡಿಯಾ (ಆಠವಲೆ) ಪಕ್ಷ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಬುಧವಾರ ಪ್ರತಿಭಟನೆ ನಡೆಸಿದರು.

‘ಮಹರ್ಷಿ ವಾಲ್ಮೀಕಿ ನಿಗಮದ ₹187 ಕೋಟಿ ಹಣ ಅನ್ಯ ಖಾತೆಗಳಿಗೆ ವರ್ಗಾವಣೆಯಾಗಿದೆ. ಮುಖ್ಯಮಂತ್ರಿ ಬಳಿ ಹಣಕಾಸು ಖಾತೆ ಇದ್ದು, ಅವರ ಕಣ್ತಪ್ಪಿನಿಂದ ಹಣ ವರ್ಗಾವಣೆ ಆಗಲು ಹೇಗೆ ಸಾಧ್ಯ ಎಂಬುದು ಸಂಶಯ ಮೂಡಿದೆ. ಹಗರಣಗಳಲ್ಲಿ ಪಾತ್ರ ಇದ್ದರೂ ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ ದದ್ದಲ್‌ ಹೆಸರು ಜಾರ್ಜ್‌ಶೀಟ್‌ನಲ್ಲಿ ಕೈ ಬಿಟ್ಟಿದ್ದಾರೆ. ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

‘ಎಸ್‌ಸಿ ಹಾಗೂ ಎಸ್ಟಿ ಸಮುದಾಯದ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಸ್ಟೈಪಂಡ್‌ ನಿಲ್ಲಿಸಲಾಗಿದೆ. ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ತಡೆಹಿಡಿಯಲಾಗಿದೆ. ಯಾದಗಿರಿ ಶಾಸಕ ಚನ್ನಾರೆಡ್ಡಿ ತುನ್ನೂರ ಹಾಗೂ ಅವರ ಪುತ್ರ ಪಂಪನಗೌಡ ಕಿರುಕುಳ ನೀಡಿದ್ದರಿಂದ ಪಿಎಸ್‌ಐ ಪರಶುರಾಮ್‌ ಮೃತಪಟ್ಟಿದ್ದಾರೆ ಎಂದು ಪಿಎಸ್‌ಐ ಪತ್ನಿ ದೂರು ನೀಡಿದ್ದಾರೆ. ಸದರಿ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಮೃತ ಪಿಎಸ್‌ಐ ಪತ್ನಿಗೆ ಸರ್ಕಾರಿ ನೌಕರಿ ಹಾಗೂ ಪರಿಹಾರ ಕೊಡಬೇಕು ಎಂದು ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಸಲ್ಲಿಸಿರುವ ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಈ ವೇಳೆ ಸಂಘಟನೆಯ ಎ.ಬಿ. ಹೊಸಮನಿ, ರೇವಣಸಿದ್ಧಪ್ಪ ಹುಳಿಪಲ್ಲೆ, ರಾಜಕುಮಾರ್‌ ನಡಗೇರಿ, ಪಾಂಡುರಂಗ ಕೊಟ್ರೆ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT