ಮಂಗಳವಾರ, ಮಾರ್ಚ್ 21, 2023
23 °C

ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ: ಸಿಐಡಿ ಅಧಿಕಾರಿಗಳ ಎದುರೇ ಆರ್.ಡಿ. ಪಾಟೀಲ ಪರಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ಕಲಬುರಗಿ: ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಹೊರಗಡೆ ಇದ್ದ ಆರ್.ಡಿ. ಪಾಟೀಲ ನಗರದ ಅಕ್ಕಮಹಾದೇವಿ ‌ಕಾಲೊನಿಯ ತನ್ನ ಮನೆಯಿಂದ ಗುರುವಾರ ರಾತ್ರಿ ‌ಪರಾರಿಯಾಗಿದ್ದಾನೆ.

ಈ ಸಂಬಂಧ ‌ಸಿಐಡಿ ಅಧಿಕಾರಿಗಳು ಅಶೋಕ‌ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪ್ರಕರಣದ ಆರೋಪಿಗಳಾದ ಆರ್.ಡಿ. ಪಾಟೀಲ ಆತನ ಸಹೋದರ ಮಹಾಂತೇಶ ಪಾಟೀಲ,  ದಿವ್ಯಾ ಹಾಗರಗಿ, ಕಾಶಿನಾಥ ಚಿಲ್ಲ ಹಾಗೂ ಮಂಜುನಾಥ ಮೇಳಕುಂದಿಯ ಮನೆಗಳ ಮೇಲೆ ಜಾರಿ ನಿರ್ದೇಶನಾಲಯದ‌ (ಇ.ಡಿ) ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದರು. ದಾಳಿ ನಡೆಸಿ ರಾತ್ರಿ ಹೊರಬಂದ ಬಳಿಕ ತುಮಕೂರು ಜಿಲ್ಲೆಯಲ್ಲಿ ದಾಖಲಾದ ಪಿಎಸ್ಐ ನೇಮಕಾತಿ ಅಕ್ರಮದ ಸಂಬಂಧ ಬಂಧಿಸಲು ಸಿಐಡಿ ಅಧಿಕಾರಿಗಳು ಆರ್.ಡಿ‌. ಪಾಟೀಲ ‌ಮನೆಗೆ ತೆರಳಿದ್ದಾರೆ. 

ಈ ಸಂದರ್ಭದಲ್ಲಿ , 'ಯಾವ ಕೇಸು, ನನಗೇನೂ ಗೊತ್ತೇ ಇಲ್ಲ. ವಿನಾಕಾರಣ ನೀವು ‌ಕಿರುಕುಳ ನೀಡುತ್ತಿದ್ದೀರಿ' ಎನ್ನುತ್ತಲೇ ಮನೆಯ ಹಿಂಬಾಗಿಲಿನಿಂದ ಪರಾರಿಯಾಗಿದ್ದಾನೆ ಎಂದು ಸಿಐಡಿ ಡಿಟೆಕ್ಟಿವ್‌ ಸಬ್ ಇನ್ ಸ್ಪೆಕ್ಟರ್ ಆನಂದ್ ದೂರಿನಲ್ಲಿ  ತಿಳಿಸಿದ್ದಾರೆ.

ಜಾಮೀನಿನ ಷರತ್ತುಗಳನ್ನು ಉಲ್ಲಂಘಿಸಿ ಆರ್.ಡಿ. ಪಾಟೀಲ‌ ಮನೆಯಿಂದ ನಾಪತ್ತೆಯಾಗಿದ್ದಾನೆ.‌ ಅದ್ದರಿಂದ ಅತನಿಗೆ ನೀಡಿದ ಜಾಮೀನು ರದ್ದುಪಡಿಸಬೇಕು ಎಂದು ಕೋರಿ ಸಿಐಡಿ ಅಧಿಕಾರಿಗಳು ಕೆಲ ದಿನಗಳ ‌ಹಿಂದೆ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಅದು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು