ಮಂಗಳವಾರ, ಮಾರ್ಚ್ 21, 2023
23 °C

ಕಲಬುರಗಿ: ನ್ಯಾಯಾಲಯಕ್ಕೆ ಶರಣಾದ ಆರ್.ಡಿ. ಪಾಟೀಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ಕಲಬುರಗಿ: ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಹೊರಗಿದ್ದ ವೇಳೆ ವಿಚಾರಣೆಗೆ ಹಾಜರಾಗದೇ ಸಿಐಡಿ ಅಧಿಕಾರಿಗಳ ಕೈಗೆ ಸಿಗದೇ ಪರಾರಿಯಾಗಿದ್ದ ಆರ್.ಡಿ.‌ ಪಾಟೀಲ ಸೋಮವಾರ ಇಲ್ಲಿ‌ನ ಐದನೇ ಹೆಚ್ಚುವರಿ ಮತ್ತು ಜಿಎಂಎಫ್ಸಿ ನ್ಯಾಯಾಲಯಕ್ಕೆ ಶರಣಾಗಿದ್ದಾನೆ.

ಕಳೆದ ಗುರುವಾರ ರಾತ್ರಿ ತುಮಕೂರಿನಲ್ಲಿ ದಾಖಲಾದ ಪಿಎಸ್ಐ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಬಂಧನ ವಾರೆಂಟ್ ನೊಂದಿಗೆ ಮನೆಗೆ ಬಂದ ಸಂದರ್ಭದಲ್ಲಿ ಅವರ ಕೈಗೆ ಸಿಗದೇ ಪರಾರಿಯಾಗಿದ್ದ. ಈ ಕುರಿತು ಸಿಐಡಿ ಅಧಿಕಾರಿಗಳು ಅಶೋಕ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಮತ್ತೊಂದೆಡೆ ಕಲಬುರಗಿಯ ಜ್ಞಾನ ಜ್ಯೋತಿ ಇಂಗ್ಲಿಷ್ ‌ಮಾಧ್ಯಮ ಶಾಲೆಯಲ್ಲಿ ನಡೆದ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ‌ವಿಚಾರಣೆ ನಡೆಸಲು ತಮ್ಮ ಎದುರು ಸೋಮವಾರ ಹಾಜರಾಗುವಂತೆ ಸಿಐಡಿ ತನಿಖಾಧಿಕಾರಿ ಪ್ರಕಾಶ್ ರಾಠೋಡ್ ಆರ್.ಡಿ. ಪಾಟೀಲಗೆ ನೋಟಿಸ್ ಜಾರಿಗೊಳಿಸಿದ್ದರು.

ಹೀಗಾಗಿ ಅನಿವಾರ್ಯವಾಗಿ ನ್ಯಾಯಾಲಯಕ್ಕೆ ಶರಣಾಗಿದ್ದಾನೆ.

ಶುಕ್ರವಾರ ಅಫಜಲಪುರ ತಾಲ್ಲೂಕಿನ ಗಾಣಗಾಪುರ ಬಳಿಯ ಸಂಬಂಧಿಕರ ತೋಟದ ಮನೆಯಿಂದ ವಿಡಿಯೊವೊಂದನ್ನು ಹರಿಬಿಟ್ಟ ಪಾಟೀಲ ತಾನು ಈ ನೆಲದ ಕಾನೂನು ‌ಗೌರವಿಸುವುದಾಗಿ, ಇಲ್ಲೇ ಇರುವುದಾಗಿ ಹೇಳಿಕೊಂಡಿದ್ದ.

ಬೆಂಗಳೂರು, ತುಮಕೂರು ಜಿಲ್ಲೆಗಳಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ‌ತಮ್ಮ ವಶಕ್ಕೆ ನೀಡುವಂತೆ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಸಲ್ಲಿಸುವ ಸಾಧ್ಯತೆ ಇದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು