ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದು ಪಿಎಸ್‌ಐ ಸಿವಿಲ್ ಲಿಖಿತ ಪರೀಕ್ಷೆ

Last Updated 3 ಅಕ್ಟೋಬರ್ 2021, 6:40 IST
ಅಕ್ಷರ ಗಾತ್ರ

ಕಲಬುರ್ಗಿ: ನಗರದ 11 ಪರೀಕ್ಷಾ ಕೇಂದ್ರಗಳಲ್ಲಿ ಗೃಹ ಇಲಾಖೆಯು ಇದೇ 3ರಂದು ಪಿಎಸ್ಐ ಸಿವಿಲ್ ಲಿಖಿತ ಪರೀಕ್ಷೆಯನ್ನು ಆಯೋಜಿಸಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಕಲಬುರ್ಗಿ ಪೊಲೀಸ್ ಕಮಿಷನರ್ ಡಾ.ವೈ.ಎಸ್. ರವಿಕುಮಾರ್, ಪರೀಕ್ಷೆ ಬರೆಯಲು ಬರುವ ಅಭ್ಯರ್ಥಿಗಳು ಕಡ್ಡಾಯವಾಗಿ ಮತದಾರರ ಗುರುತಿನ ಚೀಟಿ, ಆಧಾರ್‌ ಕಾರ್ಡ್‌ ಸೇರಿದಂತೆ ಭಾವಚಿತ್ರವಿರುವ ಗುರುಚಿನ ಚೀಟಿಯನ್ನು ತಮ್ಮೊಂದಿಗೆ ತರಬೇಕು. ನಿಗದಿತ ಸಮಯಕ್ಕಿಂತ ಮುಂಚೆ ಬೆಳಿಗ್ಗೆ 11ಕ್ಕೆ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ಬೆಳಿಗ್ಗೆ ಮತ್ತು ಮಧ್ಯಾಹ್ನ ನಡೆಯುವ ಎರಡೂ ಪರೀಕ್ಷೆಗಳನ್ನು ಬರೆಯಬೇಕು ಎಂದು ತಿಳಿಸಿದ್ದಾರೆ.

ಮೊಬೈಲ್ ಫೋನ್ ಸೇರಿದಂತೆ ಇತರೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ಜೊತೆಗೆ ತೆಗೆದುಕೊಂಡು ಬರುವಂತಿಲ್ಲ. ಪರೀಕ್ಷಾ ಸಮಯದಲ್ಲಿ ಯಾವುದೇ ಅಕ್ರಮ ನಡೆಸಿದರೆ ಇಲಾಖೆಯಿಂದ ನಡೆಸುವ ಪರೀಕ್ಷೆಗಳಿಗೆ ಹಾಜರಾಗದಂತೆ ನಿರ್ಬಂಧ ವಿಧಿಸಲಾಗುವುದು ಎಂದು ಕಮಿಷನರ್ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT