ಗುರುವಾರ , ಆಗಸ್ಟ್ 18, 2022
25 °C

ಪಿಎಸ್‌ಐ  ನೇಮಕಾತಿ  ಅಕ್ರಮ| ಜ್ಯೋತಿ ಪಾಟೀಲ ಜಾಮೀನು ಅರ್ಜಿ ತಿರಸ್ಕೃತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರಗಿ:  ಪಿಎಸ್‌ಐ  ನೇಮಕಾತಿ  ಅಕ್ರಮದಲ್ಲಿ  ಮಧ್ಯವರ್ತಿಯಾಗಿ ಕೆಲಸ ಮಾಡಿದ ಆರೋಪದ ಮೇರೆಗೆ ನ್ಯಾಯಾಂಗ ಬಂಧನದಲ್ಲಿರುವ ಜ್ಯೋತಿ ಪಾಟೀಲ ಜಾಮೀನು ಅರ್ಜಿಯನ್ನು ಇಲ್ಲಿನ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾ ಮಾಡಿದೆ.

ಶಹಾಬಾದ್ ನಗರಸಭೆಯಲ್ಲಿ ದ್ವಿತೀಯ ದರ್ಜೆ ಸಹಾಯಕಿಯಾಗಿದ್ದ ಜ್ಯೋತಿ ಪಾಟೀಲ ಅಭ್ಯರ್ಥಿ ಶಾಂತಿಬಾಯಿಗೆ ಪರೀಕ್ಷೆಯಲ್ಲಿ ಪಾಸು ಮಾಡಿಸುವ ನಿಟ್ಟಿನಲ್ಲಿ ಪ್ರಕರಣದ ಕಿಂಗ್‌ಪಿನ್ ಮಂಜುನಾಥ ಮೇಳಕುಂದಿ ಯನ್ನು ಭೇಟಿ ಮಾಡಿಸಿದ್ದರು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಪರಾರಿಯಾಗಿದ್ದ ಜ್ಯೋತಿ ಪಾಟೀಲ ಅವರನ್ನು ಮಾರ್ಚ್ 31ರಂದು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು