ಸಿಐಡಿ ನೋಟಿಸ್: ಕಲಬುರಗಿ ಭೇಟಿ ರದ್ದುಗೊಳಿಸಿದ ಪ್ರಿಯಾಂಕ್ ಖರ್ಗೆ

ಕಲಬುರಗಿ: ಪಿಎಸ್‌ಐ ಅಕ್ರಮ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದ ದಾಖಲೆ ಹಾಗೂ ಮಾಹಿತಿ ಪಡೆಯಲು ಸಿಐಡಿ ಅಧಿಕಾರಿಗಳು ಮೂರನೇ ನೋಟಿಸ್ ನೀಡಿದ್ದರಿಂದ ಚಿತ್ತಾಪುರದ ಕಾಂಗ್ರೆಸ್ ಶಾಸಕ, ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಇದೇ 5ರಿಂದ 7ರವರೆಗೆ ಹಮ್ಮಿಕೊಂಡಿದ್ದ ಜಿಲ್ಲೆಯ ಭೇಟಿಯನ್ನು ರದ್ದುಗೊಳಿಸಿದ್ದಾರೆ.
ಮೇ 4ರಂದು ಪ್ರಿಯಾಂಕ್ ಅವರಿಗೆ ನೋಟಿಸ್ ನೀಡಿದ್ದ ಸಿಐಡಿ ಡಿವೈಎಸ್ಪಿ ನರಸಿಂಹಮೂರ್ತಿ ಪಿ, ‘ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಿದ್ದ ಆಡಿಯೊ ಬಗ್ಗೆ 25ರಂದು ಸಿಐಡಿ ಕಚೇರಿಗೆ ಹಾಜರಾಗಿ ವಿವರ ನೀಡುವಂತೆ ಕೇಳಲಾಗಿತ್ತು. ಆದರೆ, 28ರಂದು ತಾವು ಉತ್ತರವನ್ನು ಸಲ್ಲಿಸಿದ್ದು, ಅಲ್ಲಿ ಪ್ರಕರಣಕ್ಕೆ ಸಂಬಂಧವಿಲ್ಲದ ಸಂಗತಿಗಳು ಕಂಡು ಬಂದಿವೆ’ ಎಂದಿದ್ದರು.
ಎರಡು ದಿನಗಳ ಒಳಗಾಗಿ ಸಿಐಡಿ ಕಚೇರಿಗೆ ಹಾಜರಾಗಿ ಮಾಹಿತಿ ನೀಡುವಂತೆ ನೋಟಿಸ್‌ನಲ್ಲಿ ತಿಳಿಸಿದ್ದಾರೆ. ಹೀಗಾಗಿ, ಸಿಐಡಿ ಕಚೇರಿಗೆ ತೆರಳಬೇಕಿರುವುದರಿಂದ ಶಾಸಕರು ಕಲಬುರಗಿ ಹಾಗೂ ಚಿತ್ತಾಪುರ ಪ್ರವಾಸವನ್ನು ರದ್ದುಗೊಳಿಸಿದ್ದಾರೆ ಎಂದು ಪ್ರಿಯಾಂಕ್ ಅವರ ಆಪ್ತ ಸಹಾಯಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.