ಇಂದಿನಿಂದ ಪಿಯು ಪೂರಕ ಪರೀಕ್ಷೆ

ಕಲಬುರ್ಗಿ: ಇದೇ 7ರಿಂದ ಜಿಲ್ಲೆಯ 18 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿ.ಯು. ಪೂರಕ ಪರೀಕ್ಷೆ ನಡೆಯಲಿದ್ದು, 12788 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಿವಶರಣಪ್ಪ ಮುಳೇಗಾಂವ, ‘ಪ್ರತಿ ತಾಲ್ಲೂಕಿಗೆ ಒಂದರಂತೆ ಪರೀಕ್ಷಾ ಕೇಂದ್ರಗಳನ್ನು ಆರಂಭಿಸಲಾಗಿದೆ. ಆಳಂದ ತಾಲ್ಲೂಕಿನಲ್ಲಿ ಮಾತ್ರ ಎರಡು ಕೇಂದ್ರಗಳಿವೆ. ಉಳಿದ ಕೇಂದ್ರಗಳು ಕಲಬುರ್ಗಿ ನಗರದಲ್ಲಿವೆ.
ದೈಹಿಕ ಅಂತರವನ್ನು ಕಾಪಾಡಿಕೊಂಡು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಪ್ರತಿ ಕೇಂದ್ರದಲ್ಲಿ ಇಬ್ಬರು ಆರೋಗ್ಯ ಇಲಾಖೆ ಸಿಬ್ಬಂದಿ ವಿದ್ಯಾರ್ಥಿಗಳ ಥರ್ಮಲ್ ಸ್ಕ್ರೀನಿಂಗ್ ಮಾಡಲಿದ್ದಾರೆ. ಹೆಚ್ಚು ಜ್ವರ ಕಾಣಿಸಿಕೊಂಡ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಕೊರೊನಾ ಪಾಸಿಟಿವ್ ಇರುವ ವಿದ್ಯಾರ್ಥಿಗಳಿಗೆ ಏಷಿಯನ್ ಮಾಲ್ ಪಕ್ಕದ ಸರ್ಕಾರಿ ವಸತಿ ನಿಲಯದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಆದರೆ, ಇಲ್ಲಿಯವರೆಗೆ ಕೊರೊನಾ ಪಾಸಿಟಿವ್ ಇರುವ ವಿದ್ಯಾರ್ಥಿಗಳ ಮಾಹಿತಿ ಬಂದಿಲ್ಲ’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.