ಪಿಡಬ್ಲುಡಿ ಜೆಇ ಚನ್ನಬಸಪ್ಪ ಮನೆ ಮೇಲೆ ದಾಳಿ: ₹ 1.5 ಕೋಟಿ ಮೌಲ್ಯದ ಆಸ್ತಿ ಪತ್ತೆ

ಕಲಬುರ್ಗಿ: ಇಲ್ಲಿನ ಹಳೆ ಜೇವರ್ಗಿ ರಸ್ತೆಯಲ್ಲಿ ಲೋಕೋಪಯೋಗಿ ಇಲಾಖೆ ಕಿರಿಯ ಎಂಜಿನಿಯರ್ ಚನ್ನಬಸಪ್ಪ ಅವರಿಗೆ ಸೇರಿದ ಅಪಾರ್ಟ್ಮೆಂಟ್ ಮೇಲೆ ಬೆಳಿಗ್ಗೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ₹ 1.5 ಕೋಟಿ ಮೌಲ್ಯದ ಆಸ್ತಿ ಪತ್ತೆ ಮಾಡಿದ್ದಾರೆ.
ದಾಖಲಾತಿಗಳ ಪರಿಶೀಲನೆ ಬಳಿಕ ಮತ್ತಷ್ಟು ಅಕ್ರಮ ಆಸ್ತಿ ಗಳಿಕೆಯಲ್ಲಿ ಹೆಚ್ಚಳ ಸಾಧ್ಯತೆ ಎನ್ನಲಾಗಿದೆ.
ಚಿತ್ರಗಳಲ್ಲಿ ನೋಡಿ..ಎಸಿಬಿ ದಾಳಿ- ಅಪಾರ ಪ್ರಮಾಣದ ಹಣ, ಚಿನ್ನ, ಬೆಳ್ಳಿ ಪತ್ತೆ
ಹಳೆ ಜೇವರ್ಗಿ ರಸ್ತೆಯಲ್ಲಿ 8 ಫ್ಲ್ಯಾಟ್ ಗಳ ಅಪಾರ್ಟ್ಮೆಂಟ್ ಹೊಂದಿರುವ ಚನ್ನಬಸಪ್ಪ ಅವರು ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಮೊಗದಮಪುರದಲ್ಲಿ 23 ಎಕರೆ ಕೃಷಿ ಜಮೀನು ಹೊಂದಿದ್ದಾರೆ. ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ 3 ಎಕರೆ ಕೃಷಿ ಜಮೀನು ಪತ್ತೆಯಾಗಿದೆ.
ಕಲಬುರ್ಗಿಯ ಕರುಣೇಶ್ವರ ನಗರದಲ್ಲಿ ಖುಷಿ ಡೆವಲಪರ್ಸ್ ಅಪಾರ್ಟ್ಮೆಂಟ್ ಹೊಂದಿದ್ದಾರೆ ಎಂದು ಎಸಿಬಿ ಎಸ್.ಪಿ. ಮಹೇಶ್ ಮೇಘಣ್ಣನವರ ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.