ಫರಹತಾಬಾದ್ (ಕಲಬುರ್ಗಿ):ಅಫಜಲಪುರ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟ ಕಲಬುರ್ಗಿ ತಾಲ್ಲೂಕಿನ ಫಹತಾಬಾದ್ ಗ್ರಾಮದ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು. ಮೂಲಸೌಕರ್ಯಕ್ಕೆ ಆದ್ಯತೆ ನೀಡಲಾಗುವುದು ಎಂದು ಶಾಸಕ ಎಂ.ವೈ. ಪಾಟೀಲ ಹೇಳಿದರು.

ತಾಲ್ಲೂಕಿನ ಫರಹತಾಬಾದ್ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಿಂದ ಹರಿಜನ ವಾಡಾಕ್ಕೆ ಸಂಪರ್ಕ ಕಲ್ಪಿಸಲು ಕೈಗೆತ್ತಿಕೊಂಡ ಲೋಕೋಪಯೋಗಿ ಇಲಾಖೆಯ 2020ನೇ ಸಾಲಿನ 5054 ಯೋಜನೆ ಅಡಿಯ ಸಿಸಿ ರಸ್ತೆ ಹಾಗೂ ಒಳಚರಂಡಿ ನಿರ್ಮಾಣ ಕಾಮಗಾರಿ ಈಚೆಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ಸರ್ಕಾರದಿಂದ ಹೆಚ್ಚಿನ ಅನುದಾನ ತರುವ ಮೂಲಕ ಹಂತ ಹಂತವಾಗಿ ಪ್ರತಿಯೊಂದು ಗ್ರಾಮದ ಅಭಿವೃದ್ಧಿ ಮಾಡಲು ಶ್ರಮಿಸುತ್ತೇನೆ. ಮತದಾರರು ನನ್ನ ಮೇಲೆ ನಂಬಿಕೆ ಇಟ್ಟು ಆಯ್ಕೆ ಮಾಡಿದ್ದಾರೆ. ಅದಕ್ಕೆ ಧಕ್ಕೆ ಬರದಂತೆ ಕೆಲಸ ಮಾಡುತ್ತೇನೆ. ರಸ್ತೆ, ಚರಂಡಿ ಹಾಗೂ ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಿದ್ದೇನೆ’ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ದಿಲೀಪ್ ಪಾಟೀಲ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಶಿವರಾಜ ಸಜ್ಜನ, ಫರಹತಾಬಾದ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ತಿಬಶೆಟ್ಟಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಹುಣಚಿರಾಯ ಪೂಜಾರಿ, ನಾಗು ನಿಂಬರ್ಗಿ ಹಾಗೂ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ ಕಂಠೆಪ್ಪ ಭಾವಗಿ, ಸಹಾಯಕ ಎಂಜಿನಿಯರ್ ಅಮರನಾಥ ಧೂಳೆ ಹಾಗೂ ಗ್ರಾಮಸ್ಥರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.