ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಧಾಕೃಷ್ಣ ದೊಡ್ಡಮನಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕಾರ

Published 25 ಜೂನ್ 2024, 6:39 IST
Last Updated 25 ಜೂನ್ 2024, 6:39 IST
ಅಕ್ಷರ ಗಾತ್ರ

ಕಲಬುರಗಿ: ಕಲಬುರಗಿ ಲೋಕಸಭಾ ಎಸ್‌ಸಿ ಮೀಸಲು ಕ್ಷೇತ್ರದಿಂದ ಗೆದ್ದು ಮೊದಲ ಬಾರಿಗೆ ಸಂಸದರಾಗಿ ಆಯ್ಕೆಯಾದ ರಾಧಾಕೃಷ್ಣ ದೊಡ್ಡಮನಿ ಅವರು ಸೋಮವಾರ ಸಂಸತ್‌ನಲ್ಲಿ ಸಂವಿಧಾನ ಪುಸ್ತಕವನ್ನು ಕೈಯಲ್ಲಿ ಹಿಡಿದು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ರಾಧಾಕೃಷ್ಣ ಅವರು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ಪತ್ನಿ ರಾಧಾಬಾಯಿ ಖರ್ಗೆ ಅವರನ್ನು ಭೇಟಿ ಮಾಡಿದರು.

ದೆಹಲಿಗೆ ತೆರಳಿದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ವಿಧಾನ ಪರಿಷತ್ ಸದಸ್ಯ ಯು.ಬಿ. ವೆಂಕಟೇಶ, ಕುಡಾ ಅಧ್ಯಕ್ಷ ಮಜರ್ ಆಲಂ ಖಾನ್, ಮುಖಂಡ ಡಾ. ಕಿರಣ್ ದೇಶಮುಖ ಸೇರಿದಂತೆ ಹಲವರು ನೂತನ ಸಂಸದರಿಗೆ ಶುಭ ಹಾರೈಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT