ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲ್ವೆ ನಿಲ್ದಾಣದಲ್ಲಿ ಲಿಫ್ಟ್‌ ಉದ್ಘಾಟನೆ

Last Updated 13 ಜನವರಿ 2022, 9:43 IST
ಅಕ್ಷರ ಗಾತ್ರ

ಕಲಬುರಗಿ: ‘ವಿಮಾನ ನಿಲ್ದಾಣದಲ್ಲಿ ಸಿಗುವ ಸವಲತ್ತುಗಳು ಕಲಬುರಗಿ ರೈಲ್ವೆ ನಿಲ್ದಾಣದಲ್ಲಿ ಸಿಗುವಂತೆ ಮಾಡುವುದು ನಮ್ಮ ಉದ್ದೇಶ. ಇದಕ್ಕೆ ಬೇಕಾಗುವ ಎಲ್ಲಾ ಸವಲತ್ತುಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಕಲ್ಪಿಸಲಾಗುವುದು’ ಎಂದು ಸಂಸದ ಡಾ. ಉಮೇಶ ಜಾಧವ ಹೇಳಿದರು.

ಕಲಬುರಗಿ ರೈಲ್ವೆ ನಿಲ್ದಾಣದ 2 ಮತ್ತು 4ನೇ ಪ್ಲಾಟ್ ಫಾರಂನಲ್ಲಿ ಹೊಸದಾಗಿ ಅಳವಡಿಸಿರುವ ಲಿಫ್ಟ್‌ಗಳನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಜಿಲ್ಲೆಯ ವೃದ್ದರು, ಚಿಕಿತ್ಸೆಗಾಗಿ ತೆರಳುವ ರೋಗಿಗಳು ಹಾಗೂ ಸಾರ್ವಜನಿಕರು ಪ್ರತಿದಿನ ರೈಲ್ವೆ ನಿಲ್ದಾಣಕ್ಕೆ ಬರುತ್ತಾರೆ. ಅವರ ಸೇವೆಗಾಗಿ ಈ ಲಿಫ್ಟ್‌ಗಳನ್ನು ಅಳವಡಿಸಲಾಗಿದೆ’ ಎಂದರು.

‘ಸರ್ಕಾರದ ಕೊರೊನಾ ನಿಯಮಗಳನ್ನು ಪಾಲಿಸಿ ಲಿಫ್ಟ್‌ಗಳನ್ನು ಜನ ಬಳಕೆಗೆ ಒದಗಿಸಬೇಕು. ವೃದ್ದರಿಗೆ ಹಾಗೂ ರೋಗಿಗಳಿಗೆ ಮೊದಲ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಲಿಫ್ಟ್‌ಗಳನ್ನು ಪ್ರತಿ ಆರು ತಿಂಗಳಿಗೊಮ್ಮೆ ನಿರ್ವಹಣೆ ಮಾಡಬೇಕು. ಯಾವ ಸಂಧರ್ಭದಲ್ಲೂ ಕೆಡದಂತೆ ನೋಡಿಕೊಳ್ಳಬೇಕು ಎಂದರು.

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಶಾಸಕ ಬಸವರಾಜ ಮತ್ತಿಮಡು, ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಶೈಲೇಶ್ ಗುಪ್ತಾ, ಕಲಬುರಗಿ ರೈಲ್ವೆ ನಿಲ್ದಾಣದ ವ್ಯವಸ್ಥಾಪಕ ಮೋನಿ ರಾಮಚಂದ್ರನ್ ಹಾಗೂ ಅಧಿಕಾರಿಗಳು, ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT