ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ ಜಿಲ್ಲೆಯಾದ್ಯಂತ ಭಾರಿ ಮಳೆ

Last Updated 2 ಆಗಸ್ಟ್ 2022, 6:31 IST
ಅಕ್ಷರ ಗಾತ್ರ

ಕಲಬುರಗಿ: ಕಲಬುರಗಿ ನಗರ ಸೇರಿದಂತೆ ಜೇವರ್ಗಿ, ಯಡ್ರಾಮಿ, ಅಫಜಲಪುರ, ಆಳಂದ, ಕಮಲಾಪುರ, ಚಿಂಚೋಳಿ ತಾಲ್ಲೂಕಿನ ಹಲವೆಡೆ ಸೋಮವಾರ ರಾತ್ರಿ ಭಾರಿ ಮಳೆಯಾಗಿದೆ.

ಇದರಿಂದಾಗಿ ಹಲವು ಕಡೆ ಸಂಪರ್ಕ ಕಡಿತವಾಗಿದೆ.

ಆಳಂದ ತಾಲ್ಲೂಕಿನ ಮಟಕಿ, ತೀರ್ಥ, ಜೀರಹಳ್ಳ, ಸಾಲೇಗಾಂವ ಗ್ರಾಮಗಳಲ್ಲಿ ಭಾರಿ ಮಳೆಗೆ ಹಳ್ಳಗಳು ಭರ್ತಿಯಾಗಿ ಹರಿಯುತ್ತಿವೆ. ಸಾಲೇಗಾಂವ ಗ್ರಾಮದ ಸಂಪರ್ಕ ಕಡಿತಗೊಂಡಿದೆ.

ಮಂಗಳವಾರ ಬೆಳಿಗ್ಗೆ ಕಲಬುರಗಿ ತಾಲ್ಲೂಕಿನ ನಂದಿಕೂರ, ಖಣದಾಳ, ಪಾಣೆಗಾಂವ, ಹೊನ್ನಕಿರಣಗಿ, ಫರಹತಾಬಾದ್, ಸೀತನೂರ, ಜೇವರ್ಗಿ ತಾಲ್ಲೂಕಿನ ಸೊನ್ನ, ದೇಸಾಯಿ ಕಲ್ಲೂರ, ಮಂದೇವಾಲ, ಕೂಡಿ, ಖಾನಿ, ಕಟ್ಟಿಸಂಗಾವಿ ಗ್ರಾಮದ ಹೊಲಗಳಲ್ಲಿ ನೀರು ನಿಂತುಕೊಂಡಿದೆ.

ನಾಗರಪಂಚಮಿ ನಿಮಿತ್ತ ಪೂಜೆಗಾಗಿ ಎಡೆಯೊಂದಿಗೆ ದೇವಸ್ಥಾನಕ್ಕೆ ತೆರಳಿದ ಮಹಿಳೆಯರು ರಸ್ತೆಯಲ್ಲಿ ನಿಂತ ನೀರಲ್ಲೇ ಬರಿಗಾಲಲ್ಲಿ ನಡೆದುಕೊಂಡು ಹೋದರು.

ಜಿಲ್ಲೆಯ ಹಲವೆಡೆ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT