ಬುಧವಾರ, ಸೆಪ್ಟೆಂಬರ್ 23, 2020
26 °C

ಕಲಬುರ್ಗಿಯಲ್ಲಿ ಬಿರುಸಿನ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ನಗರದಲ್ಲಿ ಬುಧವಾರ ಮಧ್ಯಾಹ್ನ ಸುಮಾರು ಒಂದು ತಾಸು ಬಿರುಸಿನ ಮಳೆ ಸುರಿಯಿತು. ಇದರಿಂದಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ನೀರು ಹರಿಯಿತು.

ಬೆಳಿಗ್ಗೆ ತಂಪನೆಯ ವಾತಾವರಣ ಇತ್ತು. ತುಂತುರು ಮಳೆ ನಿರೀಕ್ಷೆಯಲ್ಲಿದ್ದ ಜನರಿಗೆ ಏಕಾಏಕಿ ಬಿರುಸಿನ ಮಳೆ ಶುರುವಾಗಿದ್ದರಿಂದ ರಸ್ತೆಯಲ್ಲಿ ನೆನೆದುಕೊಂಡೇ ಮನೆ, ಕಚೇರಿ ಸೇರಿದರು.

ಬಸವೇಶ್ವರ ಆಸ್ಪತ್ರೆಯಲ್ಲಿ ಕೋವಿಡ್‌–19 ಪ್ರಯೋಗಾಲಯ ಉದ್ಘಾಟನಾ ಸಮಾರಂಭಕ್ಕೆಂದು ಅಳವಡಿಸಲಾದ ಶಾಮಿಯಾನದಲ್ಲಿ ಮಳೆ ನೀರು ತುಂಬಿಕೊಂಡಿತು. ಆದರೆ, ಅಷ್ಟರಲ್ಲಾಗಲೇ ಕಾರ್ಯಕ್ರಮ ಮುಕ್ತಾಯವಾಗಿತ್ತು. ಸತತ ಎರಡು ದಿನಗಳಿಂದ ಮಳೆ ಸುರಿಯುತ್ತಿರುವುದರಿಂದ ನಗರ ತಂಪಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.