ಕಲಬುರ್ಗಿ: ನಗರ ಸೇರಿದಂತೆ ಜಿಲ್ಲೆಯ ಚಿಂಚೋಳಿ, ಕಾಳಗಿ, ಯಡ್ರಾಮಿಯಲ್ಲಿ ಮಂಗಳವಾರ ಬಿರುಸಿನ ಮಳೆ ಸುರಿಯಿತು. ಕೆಲ ದಿನಗಳಿಂದ ಬಿಡುವುಕೊಟ್ಟಿದ್ದ ಮಳೆ ಮತ್ತೆ ಶುರುವಾಗಿದ್ದರಿಂದ ಜಿಲ್ಲೆಯಾದ್ಯಂತ ಕೆರೆ ಕಟ್ಟೆಗಳು ಭರ್ತಿಯಾಗಿವೆ.
ಚಿಂಚೋಳಿ ತಾಲ್ಲೂಕಿನಲ್ಲಿ ಸುರಿದ ಮಳೆಗೆ ಚಿಂಚೋಳಿ ತಾಲ್ಲೂಕಿನ ಚಿಮ್ಮನಚೋಡ ಬಳಿಯ ನೆಲಗಂಗಿ ಜಲಪಾತ ಉಕ್ಕಿ ಹರಿಯುತ್ತಿದೆ.
ಕಲಬುರ್ಗಿ ನಗರದಲ್ಲಿ ಮಧ್ಯಾಹ್ನ ಅರ್ಧತಾಸು ಬಂದ ಮಳೆ ಕೊಂಚ ಬಿಡುವು ಕೊಟ್ಟು ಸಂಜೆಯೂ ಗುಡುಗು, ಸಿಡಿಲಿನ ಅಬ್ಬರದೊಂದಿಗೆ ಧಾರಾಕಾರವಾಗಿ ಸುರಿಯಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.