ಅಫಜಲಪುರ (ಕಲಬುರಗಿ ಜಿಲ್ಲೆ): ಮಹಾರಾಷ್ಟ್ರದ ಉಜನಿ, ವೀರ್ ಜಲಾಶಯದಿಂದ ಹೊರಬಿಟ್ಟ 1.45 ಲಕ್ಷ ಕ್ಯುಸೆಕ್ ನೀರಿನ ಪೈಕಿ 1.40 ಲಕ್ಷ ಕ್ಯುಸೆಕ್ ನೀರು ಬುಧವಾರ ರಾತ್ರಿ ಭೀಮಾ ಜಲಾಶಯ ತಲುಪಿದ್ದು, ಘತ್ತರಗಿ ಹಾಗೂ ದೇವಲ ಗಾಣಗಾಪುರದ ಬ್ರಿಡ್ಜ್ ಕಮ್ ಬ್ಯಾರೇಜ್ ಜಲಾವೃತವಾಗಿವೆ.

‘ಬ್ಯಾರೇಜ್ ತಲುಪಿದಷ್ಟೇ ಪ್ರಮಾಣದ ನೀರನ್ನು ನದಿಗೆ ಬಿಟ್ಟಿದ್ದರಿಂದ ಗುರುವಾರ ಘತ್ತರಗಿ ಗ್ರಾಮದ ಸೇತುವೆ, ದೇವಲ ಗಾಣಗಾಪುರದ ಸೇತುವೆಗಳ ಮೇಲೆ ನೀರು ಬಂದಿದೆ. ಜೇವರ್ಗಿ ಮತ್ತು ಸಿಂದಗಿ ತಾಲ್ಲೂಕಿನ ಗ್ರಾಮಗಳ ಸಂಪರ್ಕ ಕಡಿತವಾಗಿದೆ’ ಎಂದು ತಹಶೀಲ್ದಾರ್ ಸಂಜುಕುಮಾರ ದಾಸರ, ಭೀಮಾ ಏತ ನೀರಾವರಿ ಉಪ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಸಂತೋಷಕುಮಾರ ಸಜ್ಜನ್ ತಿಳಿಸಿದರು.

‘ಮಣ್ಣೂರು ಎಲ್ಲಮ್ಮ ದೇವಿಯ ದೇವಸ್ಥಾನ ಸುತ್ತ ನೀರು ಆವರಿಸಿದ್ದು ಗೇಟ್ ಬಂದ್ ಮಾಡಲಾಗಿದೆ’ ಎಂದು ತಿಳಿಸಿದರು.

ಗುರುವಾರ ಸಂಜೆ 6ರಿಂದ ಸೊನ್ನ ಭೀಮಾ ಬ್ಯಾರೇಜ್‌ನಿಂದ 70 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.