ಶುಕ್ರವಾರ, ನವೆಂಬರ್ 27, 2020
18 °C

ಕೃಷಿಕ ಸಮಾಜ ಜಿಲ್ಲಾಧ್ಯಕ್ಷ ಸಿದ್ರಾಮಪ್ಪಗೆ ರಾಜ್ಯೋತ್ಸವ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಕಳೆದ 28 ವರ್ಷಗಳಿಂದ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾಗಿರುವ  ಸಿದ್ರಾಮಪ್ಪ ಪಾಟೀಲ ಧಂಗಾಪುರ ಅವರಿಗೆ ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಒಲಿದಿದೆ.

ಕೃಷಿ ಕ್ಷೇತ್ರದಲ್ಲಿನ ಸೇವೆ ಹಾಗೂ ರೈತಪರ ಕಾಳಜಿಯ ಕಾರಣ ಅವರಿಗೆ ಈ ಪ್ರಶಸ್ತಿ ಬಂದಿದೆ. ಇದೂ ಜಿಲ್ಲೆಗೆ ಈ ಬಾರಿ ದೊರೆತ ಏಕೈಕ ಗೌರವ ಕೂಡ ಹೌದು.

ಇದನ್ನೂ ಓದಿ... 65 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

1995ರಲ್ಲಿ ಜನತಾ ದಳ ಸರ್ಕಾರ ಇದ್ದಾಗ ಕರ್ನಾಟಕ ಕೃಷಿಕ ಸಮಾಜದ ರಾಜ್ಯ ಘಟಕದ ಅಧ್ಯಕ್ಷರಾಗಿ, ಅಖಿಲ ಭಾರತ ಕೃಷಿಕ ಸಮಾಜದ ಆಡಳಿತ ಮಂಡಳಿ ಸದಸ್ಯರಾಗಿ ಸಿದ್ರಾಮಪ್ಪ ಅವರು ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನೂರಾರು ಕಾರ್ಯಕ್ರಮಗಳನ್ನು ಮಾಡಿದ್ದಾರೆ.

ಮುಖ್ಯವಾಗಿ ಬಜೆಟ್ ಸಂದರ್ಭದಲ್ಲಿ ರೈತರೊಂದಿಗೆ ಮುಖ್ಯಮಂತ್ರಿ ನಡೆಸಲಾಗುವ ಅಭಿಪ್ರಾಯ ಸಂಗ್ರಹದ ಸಭೆಯಲ್ಲಿ ಸಿದ್ರಾಮಪ್ಪ ಅವರು ನೀಡಿರುವ ಸಲಹೆಗಳನ್ನು ಕಾರ್ಯಾನುಷ್ಠಾನಕ್ಕೆ ತಂದ ಉದಾಹರಣೆಗಳಿವೆ.

ಪ್ರಸ್ತುತ ಬಿಜೆಪಿಯಲ್ಲಿ  ಗುರುತಿಸಿಕೊಂಡಿರುವ ಅವರಿಗೆ ಈಗ 74 ವಯಸ್ಸು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು