ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನ ಮೂರ್ತಿಯ ಶೋಭಾಯಾತ್ರೆಗೆ ತಡೆ: ಕಲಬುರಗಿಯ ವಾಡಿಯಲ್ಲಿ 3 ದಿನ ನಿಷೇದಾಜ್ಞೆ

Published 23 ಜನವರಿ 2024, 4:54 IST
Last Updated 23 ಜನವರಿ 2024, 4:54 IST
ಅಕ್ಷರ ಗಾತ್ರ

ವಾಡಿ (ಕಲಬುರಗಿ ಜಿಲ್ಲೆ): ಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಸೋಮವಾರ ರಾಮ ಉತ್ಸವ ಸಮಿತಿ ಆಯೋಜಿಸಿದ್ದ ರಾಮನ ಮೂರ್ತಿಯ ಶೋಭಾಯಾತ್ರೆಗೆ ಪೊಲೀಸರು ತಡೆಯೊಡ್ಡಿದ ಬಳಿಕ ಪಟ್ಟಣದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗಿದೆ. ಹೀಗಾಗಿ, ಸೋಮವಾರ ತಡರಾತ್ರಿಯಿಂದಲೇ ಪಟ್ಟಣದಲ್ಲಿ ನಿಷೇದಾಜ್ಞೆ ಸೆಕ್ಷನ್ 144 ಜಾರಿ ಮಾಡಲಾಗಿದೆ.

ರಾಮ ಭಕ್ತರ ಮೆರವಣಿಗೆ ಬಸ್ ಸ್ಟ್ಯಾಂಡ್ ಹತ್ತಿರ ಬರುತ್ತಿದ್ದಂತೆಯೇ ಜಹೂರ್ ಖಾನ್ ಅವರಿಗೆ ಸೇರಿದ ರೆಸ್ಟೋರೆಂಟ್ ಒಳಗೆ ಕೆಲ ಯುವಕರು ನುಗ್ಗಿದರು. ರೆಸ್ಟೋರೆಂಟ್ ಮುಚ್ಚದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಜೈ ಶ್ರೀರಾಮ್ ಘೋಷಣೆ ಕೂಗುತ್ತಾ ಬಲವಂತವಾಗಿ ಮುಚ್ಚಿಸಲು ಯತ್ನಿಸಿದ್ದಾರೆ ಎನ್ನಲಾಗಿದೆ.

ನಂತರ ಅದೇ ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಮುಸ್ಲಿಂ ಯುವಕರು ಜಮಾಯಿಸಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿತು. ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಎರಡು ಸಮುದಾಯದ ಯುವಕರನ್ನು ವಾಪಸ್ ಕಳುಹಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಮುನ್ನೆಚ್ಚರಿಕೆಯ ಕ್ರಮವಾಗಿ ಜನವರಿ 25ರ ಬೆಳಿಗ್ಗೆ 6ರ ವರೆಗೆ ಪಟ್ಟಣದಾದ್ಯಂತ ಸೆಕ್ಷನ್ 144 ಜಾರಿಗೊಳಿಸಲಾಗಿದೆ.

ಸೋಮವಾರ ತಡರಾತ್ರಿ ಮೆರವಣಿಗೆ ಮೇಲೆ ಕಲ್ಲುತೂರಾಟ

ಕೆಲ ಮುಸ್ಲಿಂ ಯುವಕರಿಂದ ಕಲ್ಲು ತೋರಾಟ ಆರೋಪದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಬಿಗುವಿನ ವಾತಾವರಣ ತಲೆದೂರಿದೆ. ಈ ಹಿನ್ನೆಲೆಯಲ್ಲಿ ಚಿತ್ತಾಪುರ ತಹಶೀಲ್ದಾರ್ ಸೈಯದ್ ಷಾಷಾವಲಿ ಅವರು ಸ್ಥಳೀಯ ಪಿಎಸ್ಐ ತಿರುಮಲೇಶ ಕುಂಬಾರ ಅವರ ಮನವಿ ಮೇರೆಗೆ ಜನವರಿ 25ರ ಬೆಳಿಗ್ಗೆ 6ರ ವರೆಗೆ ಸೆಕ್ಷನ್ 144 ಜಾರಿ ಮಾಡಿ ಸಾರ್ವಜನಿಕರ ಹಾಗೂ ಅಂಗಡಿ ಮುಂಗಟ್ಟುಗಳ ವ್ಯಾಪಾರ ವಹಿವಾಟು ಗಳಿಗೆ ನಿರ್ಬಂಧ ವಿಧಿಸಲಾಗಿದೆ.

ತೀವ್ರ ಗದ್ದಲಕ್ಕೆ ಕಾರಣ ವಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ರಾಮಮೂರ್ತಿ ಮೆರವಣಿಗೆ ಹಾಗೂ ಶೋಭ ಯಾತ್ರೆಗೆ ಸೋಮವಾರ ಅವಕಾಶ ನೀಡಿರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT