ಶುಕ್ರವಾರ, 12 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅತ್ಯಾಚಾರಕ್ಕೆ ಯತ್ನ: ಅಪರಾಧಿಗೆ 7 ವರ್ಷ ಜೈಲು, ₹75 ಸಾವಿರ ದಂಡ

Published 5 ಜುಲೈ 2024, 16:01 IST
Last Updated 5 ಜುಲೈ 2024, 16:01 IST
ಅಕ್ಷರ ಗಾತ್ರ

ಕಲಬುರಗಿ: ಮಹಿಳೆಯನ್ನು ಅಪಹರಿಸಿ ಹಲ್ಲೆ ಮಾಡಿ ಅತ್ಯಾಚಾರಕ್ಕೆ ಯತ್ನಿಸಿದ ಅಪರಾಧಿಗೆ 7 ವರ್ಷ ಜೈಲು ಹಾಗೂ ₹75 ಸಾವಿರ ದಂಡ ವಿಧಿಸಿ ಇಲ್ಲಿನ 5ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ಆದೇಶಿಸಿದೆ.

ಕಲಬುರಗಿ ಬಡಾವಣೆಯೊಂದರ ನಿವಾಸಿ ಆಟೊ ಚಾಲಕ ಆಸೀಫ್‌ ಶಿಕ್ಷೆಗೊಳಗಾದ ವ್ಯಕ್ತಿ. ನೊಂದ ಯುವತಿಗೆ ಕಾನೂನು ಸೇವಾ ಪ್ರಾಧಿಕಾರದಿಂದ ₹50 ಸಾವಿರ ಪರಿಹಾರ ನೀಡುವಂತೆ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶ ಸಿ.ಡಿ. ಕರೋಶಿ ಆದೇಶಿಸಿದ್ದಾರೆ.

ಘಟನೆಯ ವಿವರ: 2021ರ ಆಗಸ್ಟ್ 23ರಂದು ಯುವತಿ ಚಿತ್ತಾಪುರದಿಂದ ಬಂದು ಖಾಸಗಿ ಕಾಲೇಜಿನಲ್ಲಿ ಪರೀಕ್ಷೆ ಬರೆದು ನಂತರ ಗೆಳತಿಯ ಮನೆಗೆ ತೆರಳಲು ಅಪರಾಧಿಯ ಆಟೊ ಹತ್ತಿ ಹೊರಟಿದ್ದಳು. ಈತ ವೇಗವಾಗಿ ಆಟೊ ಚಲಾಯಿಸಿಕೊಂಡು ಸೇಡಂ ರಸ್ತೆಯ ಜಮೀನಿನೊಂದಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ್ದ. ಸಾರ್ವಜನಿಕರು ನೋಡಿದಾಗ ಆಕೆಯನ್ನು ಬಿಟ್ಟು ಪರಾರಿಯಾಗಿದ್ದ. ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಈ ಬಗ್ಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖಾಧಿಕಾರಿಯಾಗಿದ್ದ ಪಿಐ ದಿಲೀಪ್‌ ಕುಮಾರ್ ಸಾಗರ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಹಯ್ಯಾಳಪ್ಪ ಎನ್‌. ಬಳಬಟ್ಟಿ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT