ಗುರುವಾರ , ಜೂನ್ 30, 2022
25 °C

ಜಿಮ್ಸ್‌ನಲ್ಲಿ ಮಹಿಳಾ ರೋಗಿ ಮೇಲೆ ಅತ್ಯಾಚಾರ ಯತ್ನ: ಆರೋಪಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ಮಹಿಳಾ ರೋಗಿ ಮೇಲೆ ಖಾಸಗಿ ಆಂಬುಲೆನ್ಸ್ ಚಾಲಕ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಮಧ್ಯರಾತ್ರಿ ನಡೆದಿದೆ.

ಪಿಂಟು ಎಂಬಾತನೇ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯಾಗಿದ್ದು, ಬ್ರಹ್ಮಪುರ‌ ಠಾಣೆ ಪೊಲೀಸರು ಅತನನ್ನು ವಶಕ್ಕೆ ಪಡೆದಿದ್ದಾರೆ.

ಜಿಮ್ಸ್ ನಲ್ಲಿರುವ ಜಯದೇವ ಹೃದ್ರೋಗ ವಿಭಾಗದ ವಾರ್ಡ್ ನಲ್ಲಿ  ಚಿಕಿತ್ಸೆ ಪಡೆಯುತ್ತಿರುವ 25 ವರ್ಷದ  ಮಹಿಳೆಯ ಮೇಲೆ ಈ ಕೃತ್ಯ ಯತ್ನಿಸಿದ್ದಾನೆ.

ಮಂಗಳವಾರ ರಾತ್ರಿ 12 ಗಂಟೆ ಸುಮಾರಿಗೆ ಮಹಿಳೆ ಮಲಗಿದ್ದಾಗ ಆಕೆಯ ಡೈಪರ್ ಮತ್ತು ಮೂತ್ರದ ಪೈಪ್ ತೆಗೆದು ಬಲಾತ್ಕಾರಕ್ಕೆ ಮುಂದಾಗಿದ್ದಾನೆ. ಇದರಿಂದ ಎಚ್ಚರಗೊಂಡ ಮಹಿಳೆ ಚೀರಿದ್ದಾರೆ. ಆಗ ಅಕ್ಕ-ಪಕ್ಕದ ರೋಗಿಗಳು ಕೂಡ ಎಚ್ಚರಗೊಂಡಿದ್ದು, ಆರೋಪಿ ಪರಾರಿಯಾಗಿದ್ದಾನೆ ಎಂದು ಮಹಿಳೆಯ ಸಂಬಂಧಿಯೊಬ್ಬರು ತಿಳಿಸಿದ್ದಾರೆ.

ನಂತರ ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಬಂದು ಘಟನೆಯ ವಿವರಣೆ ಪಡೆದರು. ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು