ಕಲಬುರ್ಗಿ: ಕಮಲಾಪುರದಲ್ಲಿ ಬಾಲಕಿಯೊಬ್ಬಳ ಮೇಲೆ ಒತ್ತಾಯಪೂರ್ವಕವಾಗಿ ಅತ್ಯಾಚಾರವೆಸಗಿದ ದೇವರಾಜ ಮಾಣಿಕ ಗೌರೆ ಎಂಬ ಯುವಕನಿಗೆ ಇಲ್ಲಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ವಿಶೇಷ ಸೆಷನ್ಸ್ ನ್ಯಾಯಾಧೀಶ ಗೋಪಾಲಪ್ಪ ಎಸ್. ಅವರು ಪೋಕ್ಸೊ ಕಾಯ್ದೆಯಡಿ ಕಠಿಣ ಜೀವಾವಧಿ ಶಿಕ್ಷೆ ಹಾಗೂ ₹ 50 ಸಾವಿರ ದಂಡ ವಿಧಿಸಿದ್ದಾರೆ.

ಭಾರತೀಯ ದಂಡ ಸಂಹಿತೆ 366 (ಅ)ಯಡಿ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹ 50 ಸಾವಿರ ದಂಡ, ಮತ್ತೊಂದು ಕಲಂನಡಿ ₹ 10 ಸಾವಿರ ದಂಡ, 1 ವರ್ಷ ಕಠಿಣ ಶಿಕ್ಷೆಯನ್ನು ವಿಧಿಸಿದ್ದಾರೆ.

ಅಲ್ಲದೇ, ನೊಂದ ಬಾಲಕಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ₹ 4 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ.

ದೇವರಾಜ ಗೌರೆ ಅದೇ ಗ್ರಾಮದ ಬಾಲಕಿ ಕಾಲೇಜಿನಿಂದ ವಾಪಸ್ ಬರುವಾಗ ತನ್ನ ಬೈಕ್‌ನಲ್ಲಿ ಅಪಹರಿಸಿ 2019ರ ಮೇ 7ರಂದು ಕಲಬುರ್ಗಿಯ ಸಿದ್ಧಾರ್ಥ ನಗರದ ತನ್ನ ಸಂಬಂಧಿಕರ ಮನೆಗೆ ಕರೆತಂದು ಅಲ್ಲಿ ಅತ್ಯಾಚಾರ ಎಸಗಿದ್ದ. ಈ ಸಂಬಂಧ ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದ್ದರು.

ಪ್ರಕರಣದ ತನಿಖೆ ನಡೆಸಿದ ಗ್ರಾಮೀಣ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್ ರಾಘವೇಂದ್ರ ಅವರು ನ್ಯಾಯಾಲಯಕ್ಕೆ ಅರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಗೋಪಾಲಪ್ಪ ಅವರು ಯುವಕ ಮಾಡಿದ ಅಪರಾಧಕ್ಕಾಗಿ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಿದ್ದರು.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ (ಪೋಕ್ಸೊ) ಎಲ್.ವಿ.ಚಟ್ನಾಳಕರ್ ಸಾಕ್ಷಿ ಮಾಡಿಸಿದ್ದರು. ವಿಶೇಷ ಸರ್ಕಾರಿ ಅಭಿಯೋಜಕಿ (ಪ್ರಭಾರ) ಸಾವಿತ್ರಿ ಎಸ್. ಘಂಟಿಮಠ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.