ಕಲಬುರಗಿ: ಇಲ್ಲಿನ ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಜಿಮ್ಸ್)ಯ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ 36 ವರ್ಷದ ಮಹಿಳೆ ಮೇಲೆ ನಗರದ ಇಸ್ಲಾಮಾಬಾದ್ ಕಾಲೊನಿ ನಿವಾಸಿ ಮೆಹಬೂಬ್ ಪಾಷಾ (40) ಎಂಬಾತ ಅತ್ಯಾಚಾರ ಎಸಗಿದ್ದಾನೆ.

ಶುಕ್ರವಾರ ರಾತ್ರಿ ಘಟನೆ ನಡೆದಿದ್ದು, ಅಲ್ಲಿದ್ದ ವ್ಯಕ್ತಿಯೊಬ್ಬರು ಅತ್ಯಾಚಾರದ ದೃಶ್ಯಗಳನ್ನು ಚಿತ್ರೀಕರಿಸಿದ್ದು, ಇದರ ಆಧಾರದ ಮೇಲೆ ಬ್ರಹ್ಮಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಶುಕ್ರವಾರ ರಾತ್ರಿ ಎಂಟು ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಅತ್ಯಾಚಾರಕ್ಕೆ ಒಳಗಾದ ಮಹಿಳೆ ಕಳೆದ ಆರು ತಿಂಗಳಿಂದ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ಕಲಬುರಗಿ ಪೊಲೀಸ್ ಕಮಿಷನರ್ ಚೇತನ್ ಆರ್., 'ಅತ್ಯಾಚಾರ ನಡೆದ ಬಗ್ಗೆ ಜಿಮ್ಸ್ ಸ್ಟಾಫ್ ನರ್ಸ್ ಅಕ್ಕಮಹಾದೇವಿ ಅವರು ನೀಡಿದ ದೂರಿನ ಮೇರೆಗೆ ಬ್ರಹ್ಮಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಆರೋಪಿ ಅಲ್ಲಿಗೆ ಏಕೆ ಬಂದಿದ್ದ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ' ಎಂದರು.

'ಆಸ್ಪತ್ರೆಯಲ್ಲಿ ಭದ್ರತಾ ಲೋಪ ಆಗಿರುವ ಬಗ್ಗೆ ಹಾಗೂ ಡ್ಯೂಟಿಯಲ್ಲಿ ಯಾವ ವೈದ್ಯರಿದ್ದರು ಎಂಬ ಬಗ್ಗೆ ವಿಚಾರಣೆ ನಡೆಸಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ವರದಿ ಸಲ್ಲಿಸಲಾಗುವುದು' ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.