ಗುರುವಾರ, 18 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಲಬುರಗಿ | ಬಾಲಕಿ ಮೇಲೆ ಅತ್ಯಾಚಾರ: ಯುವಕನಿಗೆ 20 ವರ್ಷ ಶಿಕ್ಷೆ

Published 20 ಜೂನ್ 2024, 7:29 IST
Last Updated 20 ಜೂನ್ 2024, 7:29 IST
ಅಕ್ಷರ ಗಾತ್ರ

ಕಲಬುರಗಿ: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದ ಯುವಕನಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ (ವಿಶೇಷ ಪೋಕ್ಸೊ) ನ್ಯಾಯಾಲಯವು 20 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ದರಿಯಾಪೂರ ತಾಲ್ಲೂಕಿನ ಅರಳಾ ಗ್ರಾಮದ ವಿಕ್ಕಿ (25) ಶಿಕ್ಷೆಗೊಳಗಾದ ವ್ಯಕ್ತಿ.

ಆಳಂದ ತಾಲ್ಲೂಕಿನ ಗ್ರಾಮವೊಂದರ ಪಿಯುಸಿ ವಿದ್ಯಾರ್ಥಿನಿಯೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಚಾಟ್ ಮಾಡುತ್ತಿದ ವಿಕ್ಕಿ, ಆಕೆ ಸಂದೇಶ ಕಳುಹಿಸಿದ್ದ ವಿಡಿಯೊ ಹಾಗೂ ಫೋಟೊಗಳ ಸ್ಕ್ರೀನ್‌ ಶಾಟ್ ತೆಗೆದುಕೊಂಡಿದ್ದ. ತನ್ನೊಂದಿಗೆ ಬಾರದೆ ಇದ್ದರೆ ವಿಡಿಯೊ ಹರಿಬಿಟ್ಟು ಮಾನ ಕಳೆಯುವುದಾಗಿ ಬೆದರಿಕೆ ಹಾಕಿದ್ದ ಆತ, 2023ರ ಮಾರ್ಚ್‌ನಲ್ಲಿ ಅರಳಾ ಗ್ರಾಮದ ತನ್ನ ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದ.

ಆಳಂದ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಇನ್‌ಸ್ಟೆಕ್ಟರ್ ಮಹಾದೇವ ಪಂಚಮುಖಿ ಅವರು ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (ವಿಶೇಷ ಪೋಕ್ಸೊ) ಎಫ್‌ಟಿಎಸ್‌ಸಿ–1 ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಅವರು ವಿಕ್ಕಿಗೆ ಪೋಕ್ಸೊ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿ 20 ವರ್ಷ ಜೈಲು ಶಿಕ್ಷೆ ಹಾಗೂ ಒಟ್ಟು ₹28,500 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ಬಿ.ತುಪ್ಪದ ಅವರು ವಾದ ಮಂಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT