ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಲಬುರಗಿ | ಬಾಲಕಿ ಮೇಲೆ ಅತ್ಯಾಚಾರ: ಮಗನಿಗೆ 30 ವರ್ಷ, ತಂದೆಗೆ 5 ವರ್ಷ ಜೈಲು

Published 20 ಆಗಸ್ಟ್ 2024, 15:49 IST
Last Updated 20 ಆಗಸ್ಟ್ 2024, 15:49 IST
ಅಕ್ಷರ ಗಾತ್ರ

ಕಲಬುರಗಿ: ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಆರೋಪ ಸಾಬೀತಾಗಿದ್ದರಿಂದ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ (ವಿಶೇಷ ಪೋಕ್ಸೊ) ನ್ಯಾಯಾಲಯವು ಮಗನಿಗೆ 30 ವರ್ಷ ಹಾಗೂ ಆತನ ತಂದೆಗೆ 5 ವರ್ಷಗಳ ಜೈಲು ಶಿಕ್ಷೆಯನ್ನು ಮಂಗಳವಾರ ವಿಧಿಸಿದೆ.

ಚಿತ್ತಾಪುರ ತಾಲ್ಲೂಕಿನ ಸತೀಶ್ ಕಾಶಿ ಸೂರ್ಯಕಾಂತ (21) ಹಾಗೂ ಸೂರ್ಯಕಾಂತ ಕಾಶಿ (45) ಶಿಕ್ಷೆಗೆ ಒಳಗಾದವರು. ಬಾಲಕಿಯನ್ನು ಪ್ರೀತಿಸುವುದಾಗಿ ಹಿಂದೆ ಬಿದ್ದಿದ್ದ ಸತೀಶ್, ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ. 18 ವರ್ಷ ತುಂಬಿದ ಬಳಿಕ ಮದುವೆ ಆಗುವುದಾಗಿ ತಿಳಿಸಿ ಮನೆಯಲ್ಲಿ ಅಕ್ರಮ ಬಂಧನದಲ್ಲಿ ಇರಿಸಿಕೊಂಡು, ಆಗಾಗ ಅತ್ಯಾಚಾರವನ್ನೂ ಎಸಗಿದ್ದ.

ಆತನ ತಂದೆಯೂ ಲೈಂಗಿಕ ಕಿರುಕುಳ ಕೊಟ್ಟು ಜೀವ ಬೆದರಿಕೆ ಹಾಕಿದ್ದ. ಈ ಸಂಬಂಧ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ತನಿಖೆ ಅಧಿಕಾರಿಗಳು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ವಾದ–ಪ್ರತಿವಾದ ಆಲಿಸಿದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (ವಿಶೇಷ ಪೋಕ್ಸೊ) ಎಫ್‌ಟಿಎಸ್‌ಸಿ–1 ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಅವರು ಸತೀಶ್‌ಗೆ ಪೋಕ್ಸೊ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿ 30 ವರ್ಷ ಜೈಲು ಶಿಕ್ಷೆ ಮತ್ತು ₹ 20 ಸಾವಿರ ದಂಡ ಹಾಗೂ ಸೂರ್ಯಕಾಂತಗೆ 5 ವರ್ಷ ಜೈಲು ಶಿಕ್ಷೆ ಮತ್ತು ₹ 3 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ಬಿ.ತುಪ್ಪದ ವಾದ ಮಂಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT